ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿ

TKE 1 (AJP) (1)
Published on

ತರೀಕೆರೆ: ಅಜ್ಜಂಪುರ ಪಟ್ಟಣ ಪಂಚಾಯಿತಿ ಚುನಾವಣೆಗೆ ದಿನ ನಿಗದಿಯಾಗಿದ್ದು, ಕಾರ್ಯಕರ್ತರು ಸಂಘಟಿತರಾಗಿ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕು. ಈ ಮೂಲಕ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿಯಲು ನೆರವಾಗಬೇಕು ಎಂದು ಮಾಜಿ ಸಚಿವ ಹಾಗೂ ಚಿಕ್ಕಮಗಳೂರು ಉಸ್ತುವಾರಿ ರಮಾನಾಥ ರೈ ಹೇಳಿದರು.

ಅಜ್ಜಂಪುರ ಪಟ್ಟಣದ ಶ್ರೀ ಬೀರಲಿಂಗೇಶ್ವರ ಸಮುದಾಯ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಏರ್ಪಡಿಸಿದ್ದ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ಅಜ್ಜಂಪುರ ಪಟ್ಟಣ ಪಂಚಾಯಿತಿಯ ಎಲ್ಲ ವಾರ್ಡ್‌ಗಳಲ್ಲೂ ಒಮ್ಮತದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದ್ದು, ಕಾರ್ಯಕರ್ತರು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಪ್ರಯೋಜನ, ಸಿಎಂ ಸಿದ್ದರಾಮಯ್ಯ ಅವರ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸಿ ಮತವಾಗಿ ಪರಿರ್ವತಿಸುವ ಪ್ರಯತ್ನ ಮಾಡಬೇಕು ಎಂದರು.

ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ಅವಿರತ ಪ್ರಯತ್ನದಿಂದ ಅಜ್ಜಂಪುರ ಪಟ್ಟಣವನ್ನು ತಾಲೂಕು ಕೇಂದ್ರವಾಗಿಸಲಾಗಿದೆ. ಅಂದಿನಿಂದಲೂ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಅನುದಾನ ತರಲಾಗಿದೆ. ವಿವಿಧ ಇಲಾಖೆಯ ಕಚೇರಿ ನಿರ್ಮಾಣಕ್ಕೆ ರೂಪುರೇಷೆ ತಯಾರಿಸಲಾಗಿದೆ. ಆಡಳಿತ ಸೌಧ ಮಾತ್ರವಲ್ಲದೇ, ಎಲ್ಲ ಇಲಾಖೆ ಕಚೇರಿ ಕಟ್ಟಡ ನಿರ್ಮಾಣ ಕಾರ್ಯ ಹಂತ, ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕೆಪಿಸಿಸಿ ಸದಸ್ಯ ಜಿ.ನಟರಾಜ್, ಪಂಚಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಅಜ್ಜಂಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಎಂ.ದಯಾನಂದ್, ಬಗರ್ ಹುಕುಂ ಸಮಿತಿ ಸದಸ್ಯ ಪ್ರಕಾಶ್, ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ತಿಪ್ಪೇಶ್ ಮಡಿವಾಳ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net