ಪೌತಿ ಖಾತೆ ಆಂದೋಲನ ಯಶಸ್ಸಿಗೆ ಶ್ರಮಿಸಿ

30ark1
Published on

ಅರಕಲಗೂಡು: ಕಂದಾಯ ಇಲಾಖೆ ಅಧಿಕಾರಿಗಳು ಪೌತಿ ಖಾತೆ ಆಂದೋಲನವನ್ನು ಯಶಸ್ವಿಗೊಳಿಸುವ ಮೂಲಕ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಶಾಸಕ ಎ.ಮಂಜು ಹೇಳಿದರು.

ಪಟ್ಟಣದ ದೇವರಾಜ ಅರಸು ಭವನದಲ್ಲಿ ಅರಕಲಗೂಡು ದಸರಾ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ಭೂಮಿ ದಸರಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ತಾಲೂಕಿನಲ್ಲಿ ಪೋಡ್ ದುರಸ್ತಿ ಆಗಿರುವ 1725 ಪಹಣಿಗಳಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಗೆ ಆಗಮಿಸಿ ರೈತರಿಗೆ ವಿತರಣೆ ಮಾಡಲಿದ್ದಾರೆ. ಅಧಿಕಾರಿಗಳು ಕಂದಾಯ ಇಲಾಖೆಯಲ್ಲಿ ರೈತರಿಗೆ ದೊರೆಯುವ ಸೌಲಭ್ಯಗಳನ್ನು ತುರ್ತಾಗಿ ಒದಗಿಸಿ ಕಚೇರಿಗೆ ಅಲೆದಾಡಿಸದಂತೆ ಸೂಚಿಸಿದರು.

ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಗ್ರೇಡ್- 2 ತಹಸೀಲ್ದಾರ್ ಸಿ.ಸ್ವಾಮಿ, ಪಪಂ ಅಧ್ಯಕ್ಷ ಪ್ರದೀಪ್ ಕುಮಾರ್, ಉಪಾಧ್ಯಕ್ಷ ಸುಬಾನ ಷರೀಫ್, ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ಭೂ ದಾಖಲೆಗಳ ಇಲಾಖೆ ಸಹಾಯಕ ನಿರ್ದೇಶಕ ಸುಂದರ್, ನೋಂದಣಾಧಿಕಾರಿ ಸೋಮಶೇಖರ್, ಉಪ ಖಜಾನಾಧಿಕಾರಿ ವಿಜಯಕುಮಾರ್ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಇದ್ದರು.

ಪೌತಿ ಖಾತೆ ಆಗಿರುವ ರೈತರಿಗೆ ಪಹಣಿ, ವೃದ್ಧರಿಗೆ ಪಿಂಚಣಿ ಮಂಜೂರಾತಿ ಪತ್ರ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net