ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮವಹಿಸಿ

31 TKE 1 (BJP)
Published on

ತರೀಕೆರೆ: ನರೇಂದ್ರ ಮೋದಿ ಅವರು ಪ್ರಧಾನಿ ಆದ ಮೇಲೆ ಕೇಂದ್ರದಲ್ಲಿ ಸಹಕಾರ ಸಚಿವಾಲಯ ಆರಂಭಿಸಿ ದೇಶದಲ್ಲಿ ಸಹಕಾರಿ ಚಳವಳಿ ಗಟ್ಟಿಗೊಳಿಸಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬಿಜೆಪಿ ಮಂಡಲದಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಆಯ್ಕೆಯಾದ ನೂತನ ಅಧ್ಯಕ್ಷರು ಹಾಗೂ ನಿರ್ದೇಶಕರನ್ನು ಅಭಿನಂದಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸಹಕಾರಿ ಕ್ಷೇತ್ರದ ಬಲವರ್ಧನೆಗೆ ಶ್ರಮವಹಿಸುವುದು ಅಗತ್ಯವಾಗಿರುವುದರಿಂದ ಸಹಕಾರಿ ಕ್ಷೇತ್ರದಲ್ಲಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಸಮಾಜದ ಕಟ್ಟಕಡೆಯ ಜನರನ್ನು ಗುರಿಯಾಗಿಸಿ ಅವರಿಗೆ ಸೌಲಭ್ಯ ಕೊಡಿಸಬೇಕು. ಸಹಕಾರಿ ಕ್ಷೇತ್ರ ದೊಡ್ಡ ಮಟ್ಟದಲ್ಲಿ ಬೆಳೆಯಲು ಸ್ಥಳೀಯ ಸಂಘಗಳು, ಆಡಳಿತ ಮಂಡಳಿ ಅತ್ಯಂತ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು. ಸಣ್ಣ, ಅತಿ ಸಣ್ಣ ರೈತರಿಗೆ ಸೌಲಭ್ಯ ಕೊಡಿಸಲು ಮುಂದಾಗಬೇಕು ಎಂದರು.

ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್ ಮಾತನಾಡಿ, ಜಿಲ್ಲಾ ಕೇಂದ್ರ ಬ್ಯಾಂಕ್ ಪ್ರಸ್ತಕ ಸಾಲಿನಲ್ಲಿ 7.50 ಕೋಟಿ ರೂ. ನಿವ್ವಳ ಲಾಭಗಳಿಸಿದೆ. ನಮ್ಮ ಆಡಳಿತ ಮಂಡಳಿ ಜಿಲ್ಲೆಯಾದ್ಯಂತ ಎಲ್ಲ ಸಹಕಾರ ಸಂಘಗಳಿಗೂ 219 ಕೋಟಿ ಹೆಚ್ಚುವರಿ ಸಾಲ ನೀಡಿದೆ. ಮುಂದಿನ ದಿನಗಳಲ್ಲಿ ಕೆಸಿಸಿ ಸಾಲ ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net