ಪಕ್ಷದ ಬಲವರ್ಧನೆಗೆ ಶ್ರಮವಹಿಸಿ: ಶ್ರೀನಿವಾಸ್

sc morcha
Published on

ಮಡಿಕೇರಿ: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಶ್ರಮವಹಿಸುವಂತೆ ಬಿಜೆಪಿ ಎಸ್.ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜಿ.ಶ್ರೀನಿವಾಸ್ ಮನವಿ ಮಾಡಿದರು.

ನಗರದ ಜಿಲ್ಲಾ ಕಛೇರಿಯಲ್ಲಿ ಶನಿವಾರ ನಡೆದ ಭಾರತೀಯ ಜನತಾ ಪಾರ್ಟಿ ಎಸ್.ಸಿ ಮೋರ್ಚಾದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿ,

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಸರ್ಕಾರದ ಯೋಜನೆಗಳು ಪರಿಶಿಷ್ಟರಿಗೆ ದೊರಕಿಸಿಕೊಡುವಲ್ಲಿ ಎಸ್‌ಸಿ ಮೋರ್ಚಾವು ಶ್ರಮಪಡಬೇಕು. ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಪರಿಶಿಷ್ಟರಿಗೆ ಮಾಹಿತಿ ನೀಡುವುದರ ಜತೆಗೆ ಅವರನ್ನು ಸಂಘಟಿಸಿ ಪಕ್ಷದ ಬಲವರ್ಧನೆಗೆ ಶ್ರಮವಹಿಸಬೇಕು ಎಂದರು.

ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಮಾತನಾಡಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನವನ್ನು ರಾಜ್ಯ ಸರ್ಕಾರ ದುರ್ಬಳಕೆ ಮಾಡುತ್ತಿದೆ. ಈ ವಿಚಾರವಾಗಿ ಅನೇಕ ಹೋರಾಟ ಪ್ರತಿಭಟನೆ ನಡೆದಿದ್ದು, ಎಸ್ಸಿ ಮೋರ್ಚಾವು ಎಲ್ಲ ಹೋರಾಟದಲ್ಲಿ ಪಾಲ್ಗೊಳ್ಳುತ್ತಿದೆ. ಪಕ್ಷದ ಬಲವರ್ಧನೆಗೆ ಎಲ್ಲರೂ ಕೈಜೋಡಿಸುವಂತೆ ಮನವಿ ಮಾಡಿದರು.

ಬಿಜೆಪಿ ಎಸ್ಸಿ ಮೋರ್ಚದ ಅಧ್ಯಕ್ಷ ಪಿಎಂ ರವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ಎಸ್‌ಸಿ ಮೋರ್ಚಾವನ್ನು ಬಲಿಷ್ಠ ಗೊಳಿಸಲಾಗುವುದು. ಈ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮ ಆಯೋಜಿಸಿ ಪರಿಶಿಷ್ಟ ಪರವಾಗಿ ಬಿಜೆಪಿ ಎಸ್‌ಸಿ ಮೋರ್ಚಾ ಕಾರ್ಯನಿರ್ವಹಿಸಲಿದೆ ಎಂದರು.

ಸಭೆಯಲ್ಲಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಪಿ.ಕೆ.ಚಂದ್ರು, ಚೇತನ್ ಶಿವಪ್ಪ, ಉಪಾಧ್ಯಕ್ಷ ಕೆ.ಕೆ.ದೇವಪ್ಪ, ರಾಮಕೃಷ್ಣ, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಚೆನ್ನಿಗಯ್ಯ ಸೇರಿದಂತೆ ಜಿಲ್ಲೆಯ ಜಿಲ್ಲಾ, ತಾಲೂಕು, ಮಂಡಲ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net