

ಹೊನ್ನಾವರ: ದೈಹಿಕ ಶಿಕ್ಷಣ ಶಿಕ್ಷಕರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಿ ಕ್ರೀಡಾಕೂಟಗಳನ್ನು ಯಶಸ್ವಿಯಾಗಿ ನಡೆಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಹೇಳಿದರು.
ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ದೈಹಿಕ ಶಿಕ್ಷಣ ಶಿಕ್ಷಕರ ಸಭೆ ಮತ್ತು ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತಾಲೂಕಿನಲ್ಲಿ ಕಡಿಮೆ ಸಂಖ್ಯೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಿದ್ದರೂ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರೇಮಕಾಂತ ನಾಯ್ಕ, ಬಾಲಕೃಷ್ಣ ಹೆಗಡೆ, ರಾಜೇಶ್ವರಿ ಹೆಗಡೆ, ಮುಕ್ತಾ ನಾಯ್ಕ ಹಾಗೂ ವರ್ಗಾವಣೆಗೊಂಡ ಕೆರೋಲಿನ್ ಫಾತಿಮಾ ಅವರನ್ನು ಸನ್ಮಾನಿಸಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಾಬು ನಾಯ್ಕ, ಬಿಆರ್ಸಿ ಸಮನ್ವಯಾಧಿಕಾರಿ ವಿನಾಯಕ ಅವಧಾನಿ, ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಜಿಲ್ಲಾ ಗೌರವಾಧ್ಯಕ್ಷ ಸುಧೀಶ ನಾಯ್ಕ, ಸಾಧನಾ ಬರ್ಗಿ, ಶಿಕ್ಷಣ ಸಂಯೋಜಕರಾದ ಪ್ರಮೋದ ನಾಯ್ಕ, ದೀಪಾ ಶೆಟ್ಟಿ, ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಗೌರೀಶ ಭಂಡಾರಿ ಇತರರಿದ್ದರು. ವಿ.ಜಿ. ಭಟ್ ಸ್ವಾಗತಿಸಿದರು. ಎಂ.ಟಿ. ಗಣಪತಿ ವಂದಿಸಿದರು. ಎಸ್.ಎಂ. ಲೋಪಿಸ್ ನಿರ್ವಹಿಸಿದರು.