ಅಂಗನವಾಡಿ ಕೇಂದ್ರಗಳ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣ

IMG-20250724-WA0160
ಅರಕಲಗೂಡಿನಲ್ಲಿ ಆಯೋಜಿಸಿದ್ದ ಅಂಗನವಾಡಿ ಕೇಂದ್ರಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕ ಎ.ಮಂಜು ಮಾತನಾಡಿದರು. ಕೆ.ಸಿ.ಸೌಮ್ಯಾ, ವೆಂಕಟೇಶ್, ರಮೇಶ್ ಇತರರಿದ್ದರು.
Published on

ಅರಕಲಗೂಡು: ತಾಲೂಕಿನ ಎಲ್ಲ ಅಂಗನವಾಡಿ ಕೇಂದ್ರಗಳ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳು ಕಾಲಮಿತಿಯೊಳಗೆ ಪೂರ್ಣಗೊಳ್ಳಲಿದ್ದು ಮುಂದಿನ 6 ತಿಂಗಳಲ್ಲಿ ಸ್ವಂತ ಕಟ್ಟಡ ಹೊಂದಲಿವೆ ಎಂದು ಶಾಸಕ ಎ. ಮಂಜು ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ತಾಲೂಕಿನ ಗ್ರಾಮೀಣ ಭಾಗದಲ್ಲಿ 270 ಹಾಗೂ ಪಟ್ಟಣ ಪ್ರದೇಶದಲ್ಲಿ 22 ಸೇರಿದಂತೆ 292 ಅಂಗನವಾಡಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. 19 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. 31 ಕೇಂದ್ರಗಳಿಗೆ ಕಟ್ಟಡದ ಅಗತ್ಯ ಇದ್ದು 12 ಕೇಂದ್ರಗಳಿಗೆ ನಿವೇಶನ ಗುರುತಿಸಲಾಗಿದೆ ಎಂದು ತಿಳಿಸಿದರು.

ಉಳಿದ 19 ಕೇಂದ್ರಗಳಿಗೆ ಕಂದಾಯ ಮತ್ತು ಪಪಂ ವ್ಯಾಪ್ತಿಯ ಸಿಎ ನಿವೇಶನಗಳಲ್ಲಿ ನಿವೇಶನ ಒದಗಿಸುವಂತೆ ತಹಸೀಲ್ದಾರ್ ಮತ್ತು ಪಪಂ ಮುಖ್ಯಾಧಿಕಾರಿಗೆ ಸೂಚನೆ ನೀಡಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಅಗತ್ಯವಾದ ಹಣ ಬಿಡುಗಡೆಯಾಗಿದ್ದು ನಿವೇಶನ ಇರುವ ಕಡೆಗಳಲ್ಲಿ ಕಾಮಗಾರಿ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮುಂದಿನ 6 ತಿಂಗಳಲ್ಲಿ ಎಲ್ಲ ಕೇಂದ್ರಗಳೂ ಸ್ವಂತ ಕಟ್ಟಡ ಹೊಂದಲಿವೆ ಎಂದರು.

ತಹಸೀಲ್ದಾರ್ ಕೆ.ಸಿ.ಸೌಮ್ಯಾ, ಸಿಡಿಪಿಒ ವೆಂಕಟೇಶ್, ತಾಪಂ ನರೇಗಾ ಸಹಾಯಕ ನಿರ್ದೇಶಕ ಪ್ರಕಾಶ್, ಯೋಜನಾಧಿಕಾರಿ ಧರ್ಮೇಂದ್ರ, ಪಂಚಾಯತ್ ರಾಜ್ ಇಲಾಖೆ ಎಇಇ ರಮೇಶ್, ಪಪಂ ಮುಖ್ಯಾಧಿಕಾರಿ ನಾಗೇಂದ್ರಕುಮಾರ್, ಭೂ ಮಾಪನ ಇಲಾಖೆ ಸಹಾಯಕ ನಿರ್ದೇಶಕ ಸುಂದರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net