ಮಕ್ಕಳ ಸ್ನೇಹಿ ಗ್ರಾಮಸಭೆ ಕುರಿತು ಜಾಗೃತಿ

11SPT02.
ಸೋಮವಾರಪೇಟೆ ಸಮೀಪದ ಯಡವನಾಡಿದನ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸ್ನೇಹಿ ಗ್ರಾಮಸಭೆ ಕುರಿತು ಜಾಗೃತಿ ಕಾರ್ಯಾಗಾರ ನಡೆಯಿತು. ಗೌತಮ್ ಮಾಹಿತಿ ನೀಡಿದರು. ಪೊನ್ನಪ್ಪ, ವಿಕ್ರಂಸಾಗರ್, ರಜನಿಕಾಂತ್ ಇದ್ದರು.
Published on

ಸೋಮವಾರಪೇಟೆ: ಐಗೂರು ಸರ್ಕಾರಿ ಪ್ರೌಢಶಾಲೆ, ಯಡವಾರೆ ಮತ್ತು ಯಡವನಾಡು ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಶುಕ್ರವಾರ ನಾವು ಪ್ರತಿಷ್ಠಾನ ಕೊಡಗು, ಸಿಎಂಸಿಎ ಮತ್ತು ಪ್ರಕೃತಿ ಫೌಂಡೇಶನ್ ಅರಸೀಕೆರೆ ಸಹಯೋಗದೊಂದಿಗೆ ಮಕ್ಕಳ ಹಕ್ಕುಗಳು ಮತ್ತು ಮಕ್ಕಳ ಸ್ನೇಹಿ ಗ್ರಾಮಸಭೆ ಕುರಿತು ಜಾಗೃತಿ ಕಾರ್ಯಾಗಾರ ನಡೆಯಿತು.

ಮಕ್ಕಳ ಗ್ರಾಮಸಭೆ, ಮಕ್ಕಳ ಹಕ್ಕುಗಳು, ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ಧತಿ, ಮಕ್ಕಳ ಸಹಾಯವಾಣಿ ಮುಂತಾದ ವಿಷಯಗಳ ಬಗ್ಗೆ ನಾವು ಪ್ರತಿಷ್ಠಾನದ ಸಂಸ್ಥಾಪಕ ಗೌತಮ್ ಕಿರಗಂದೂರು ಮಾಹಿತಿ ನೀಡಿದರು. ಸಂಸ್ಥೆಯ ಸದಸ್ಯರಾದ ಪಿ.ಬಿ.ಪೊನ್ನಪ್ಪ, ವಿಕ್ರಂ ಸಾಗರ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಐಗೂರು ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಯಶವಂತ್ ಕುಮಾರ್, ಯಡವಾರೆ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಕುಮಾರ್, ಯಡವನಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜು, ಯಡವನಾಡು ವಾಲ್ಮೀಕಿ ಆಶ್ರಮ ಶಾಲೆಯ ಮುಖ್ಯ ಶಿಕ್ಷಕ ರಜನಿಕಾಂತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net