

ರಾಯಚೂರು: ಅಕಾರಿಗಳು ಜನರಿಗೆ ಅನುಕೂಲಕರವಾಗಿರುವಂತೆ ಕೆಲಸ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ ನಿವಾರಣೆ ಮಾಡಿದಾಗ ಆಡಳಿತ ಯಂತ್ರ ಸಮರ್ಪಕವಾಗಿ ನಡೆಯಲಿದೆ ಎಂದು ಸಣ್ಣ ನೀರಾವರಿ ಖಾತೆ ಸಚಿವ ಎನ್.ಎಸ್.ಬೋಸರಾಜು ಹೇಳಿದರು.
ಸ್ಥಳೀಯ ನಗರಸಭೆ ಕಚೇರಿಯಲ್ಲಿ ಮುಟೇಷನ್, ಇ ಖಾತಾ, ತೆರಿಗೆ ಪಾವತಿ ಸೇರಿದಂತೆ ಇನ್ನಿತರ ಸೇವೆಗಳಿಗೆ ನೂತನವಾಗಿ ಆರಂಭಿಸಲಾದ ಸಕಾಲ ಸೇವೆ ಕೌಂಟರ್‌ಗಳನ್ನು ಶನಿವಾರ ಉದ್ಘಾಟಿಸಿ ಮಾತನಾಡಿ, ನಗರಸಭೆ ಒಂದೇ ಸೂರಿನಡಿ ಜನರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲು ಮುಂದಾಗಿರುವುದು ಶ್ಲಾಘನೀಯ ಎಂದರು.
ನಗರದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ನಗರಸಭೆಯ ಮೇಲೆ ಎಲ್ಲವೂ ಆಧಾರಿತವಾಗಿದೆ. ಎಲ್ಲ ವಾರ್ಡ್‌ಗಳ ಸದಸ್ಯರು ತಮ್ಮ ವಾರ್ಡ್‌ಗಳಲ್ಲಿನ ಸಮಸ್ಯೆಗಳನ್ನು ಆಲಿಸಿ ನಿವಾರಿಸುವ ಕೆಲಸ ಮಾಡಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಅದನ್ನು ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಜಯಣ್ಣ, ಬಸವರಾಜ ಪಾಟೀಲ್ ದರೂರ, ಜಿಂದಪ್ಪ, ತಿಮ್ಮಪ್ಪ ನಾಯಕ, ಬಿ.ರಮೇಶ, ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಮುಖಂಡರಾದ ಪಾರಸಮಲ್ ಸುಖಾಣಿ, ಕೆ.ಶಾಂತಪ್ಪ, ಜಿ.ಬಸವರಾಜ ರೆಡ್ಡಿ, ನರಸಿಂಹಲು ಮಾಡಗಿರಿ, ಆಂಜಿನೇಯ ಕಡಗೋಲ ಉಪಸ್ಥಿತರಿದ್ದರು.