ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಿಸುವ ಕೆಲಸವಾಗಬೇಕು

13-12-Shiva-3
ರಾಯಚೂರಿನ ಸ್ಟೇಷನ್ ಬಜಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಭವನದಲ್ಲಿ ಗ್ರಂಥಾಲಯ ನೋಡಲ್ ಶಿಕ್ಷಕರಿಗಾಗಿ ಬುಧವಾರ ಏರ್ಪಡಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ ಮಾತನಾಡಿದರು. ಪ್ರೊಬೇಷನರಿ ಐಎಎಸ್ ಅಕಾರಿ ಸಾಹಿತ್ಯ ಆಲದಕಟ್ಟೆ, ಡಿಡಿಪಿಐ ಕೆ.ಡಿ.ಬಡಿಗೇರ, ಜಿಲ್ಲಾ ಯೋಜನಾ ಉಪ ಸಮನ್ವಯಾಕಾರಿ ಇಂದಿರಾ, ಬಿಇಒ ಚಂದ್ರಶೇಖರ ಭಂಡಾರಿ, ಮಹತ್ವಾಕಾಂಕ್ಷಿ ಜಿಲ್ಲಾ ಕಾರ್ಯಕ್ರಮಾಕಾರಿ ಮಹ್ಮದ್ ಯೂಸ್ೂ, ಕಲಿಕಾ ಟ್ರಸ್ಟ್‌ನ ಡಿ.ಶಿವಕುಮಾರ ಇದ್ದರು.
Published on

ರಾಯಚೂರು: ಸರ್ಕಾರಿ ಶಾಲೆಗಳಲ್ಲಿ ಗ್ರಂಥಾಲಯಗಳನ್ನು ಆರಂಭಿಸುವ ಮೂಲಕ ಮಕ್ಕಳಲ್ಲಿ ಓದುವ ಹವ್ಯಾಸ ಮತ್ತು ಕಲಿಕಾ ಸಾಮರ್ಥ್ಯ ಹೆಚ್ಚಿಸುವಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಕರ ಕೆಲಸ ಮಾಡಬೇಕು ಎಂದು ಜಿಲ್ಲಾಕಾರಿ ಚಂದ್ರಶೇಖರ ನಾಯಕ ಹೇಳಿದರು.
ನಗರದ ಸ್ಟೇಷನ್ ಬಜಾರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಭಾಭವನದಲ್ಲಿ ಜಿಲ್ಲಾಡಳಿತದಿಂದ ಗ್ರಂಥಾಲಯದ ನೋಡಲ್ ಶಿಕ್ಷಕರಿಗಾಗಿ ಬುಧವಾರ ಏರ್ಪಡಿಸಿದ್ದ ಎರಡು ದಿನದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ಗ್ರಂಥಾಲಯವಿಲ್ಲದ ಗ್ರಾಮೀಣ ಭಾಗದ ಶಾಲೆಗಳಲ್ಲಿ ಗ್ರಂಥಾಲಯ ಸ್ಥಾಪಿಸಿ ಅದಕ್ಕೆ ನೋಡಲ್ ಶಿಕ್ಷಕರನ್ನು ನೇಮಕ ಮಾಡುವ ಉದ್ದೇಶ ಹೊಂದಲಾಗಿದೆ ಎಂದರು.
ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿರುವ ಗ್ರಂಥಾಲಯಗಳಲ್ಲಿ ಹೆಚ್ಚುವರಿ ಪುಸ್ತಕಗಳನ್ನು ನೀಡಲಾಗುತ್ತದೆ. ಗ್ರಂಥಾಲಯದ ಶಿಕ್ಷಕರಿಗೆ ಗ್ರಂಥಾಲಯದಲ್ಲಿ ಮಕ್ಕಳಿಗೆ ಯಾವ ರೀತಿ ಅಭ್ಯಾಸ ಮಾಡಿಸಬೇಕು ಎಂಬುದರ ಬಗ್ಗೆ ತರಬೇತಿ ನೀಡಲಗುತ್ತಿದ್ದು, ಶಿಕ್ಷಕರು ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಚಂದ್ರಶೇಖರ ನಾಯಕ ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರೊಬೇಷನರಿ ಐಎಎಸ್ ಅಕಾರಿ ಸಾಹಿತ್ಯ ಆಲದಕಟ್ಟೆ, ಡಿಡಿಪಿಐ ಕೆ.ಡಿ.ಬಡಿಗೇರ, ಜಿಲ್ಲಾ ಯೋಜನಾ ಉಪ ಸಮನ್ವಯಾಕಾರಿ ಇಂದಿರಾ, ಬಿಇಒ ಚಂದ್ರಶೇಖರ ಭಂಡಾರಿ, ಮಹತ್ವಾಕಾಂಕ್ಷಿ ಜಿಲ್ಲಾ ಕಾರ್ಯಕ್ರಮಾಕಾರಿ ಮಹ್ಮದ್ ಯೂಸ್ೂ, ಕಲಿಕಾ ಟ್ರಸ್ಟ್‌ನ ಡಿ.ಶಿವಕುಮಾರ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net