ಆರು ತಿಂಗಳಲ್ಲಿ ಕಾಮಗಾರಿ ಪೂರ್ಣ, ಜಿಪಂ ಅಧ್ಯಕ್ಷ ವಿ. ಪ್ರಸಾದ್ ಸೂಚನೆ

devanahally 1
Published on

ದೇವನಹಳ್ಳಿ: ಜಿಲ್ಲಾ ಪಂಚಾಯಿತಿ ಅನುದಾನದಲ್ಲಿ 60 ಲಕ್ಷ ರೂ. ವೆಚ್ಚದ ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಕಬಡ್ಡಿ ಹಾಗೂ ಕುಸ್ತಿ ಅಂಕಣಗಳನ್ನು ನಿರ್ವಿುಸುವ ಕಾಮಗಾರಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ. ಪ್ರಸಾದ್ ಸೋಮವಾರ ಶಿಲನ್ಯಾಸ ನೆರವೇರಿಸಿದರು.

ನಂತರ ಮಾತನಾಡಿದ ಅವರು, ಜಿಲ್ಲಾಮಟ್ಟದಲ್ಲಿ ಗುರುತಿಸಿಕೊಂಡಿರುವ ದೇವನಹಳ್ಳಿಯಲ್ಲಿ ಸುಸಜ್ಜಿತವಾದ ಕ್ರೀಡಾ ಅಂಕಣಗಳು ಇರಲಿಲ್ಲ. ಇದನ್ನು ಮನಗಂಡು ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ. ಮಂಜುನಾಥ್ ಹಾಗೂ ಅನಂತಕುಮಾರಿ ಚಿನ್ನಪ್ಪನವರ ಮನವಿಯ ಮೇರೆಗೆ ಕ್ರೀಡಾ ಅಂಕಣಗಳನ್ನು ನಿರ್ವಿುಸಲಾಗುತ್ತಿದೆ ಎಂದರು.

ನಿರ್ಮಾಣ ಕಾಮಗಾರಿ ಇನ್ನು ಆರು ತಿಂಗಳಲ್ಲಿ ಪೂರ್ಣಗೊಳ್ಳಬೇಕು. ಬಳಿಕ ಕ್ರೀಡಾಪಟುಗಳು ಇದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು. 14 ಲಕ್ಷ ರೂ. ವೆಚ್ಚದಲ್ಲಿ ನಿರ್ವಿುಸಲಾಗಿರುವ ಶೌಚಗೃಹ ಹಾಗೂ ಜಿಮ್ಳನ್ನು ಉದ್ಘಾಟಿಸಲಾಯಿತು.

ಪುರಸಭೆಯ ಮಾಜಿ ಅಧ್ಯಕ್ಷ ಸಿ. ಜಗನ್ನಾಥ್, ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ. ಮಂಜುನಾಥ್, ಸದಸ್ಯೆ ಅನಂತಕುಮಾರಿ, ಪುರಸಭೆ ಅಧ್ಯಕ್ಷೆ ರೇಖಾ ವೇಣುಗೋಪಾಲ್, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್. ನಾಗೇಶ್, ಸದಸ್ಯರಾದ ಪೈಲ್ವಾನ್ ವೇಣುಗೋಪಾಲ್, ಯುವಜನಾ ಸೇವೆ ಇಲಾಖೆಯ ಗೀತಾ, ನಿರ್ವಿುತಿ ಕೇಂದ್ರದ ವ್ಯವಸ್ಥಾಪಕ ರುದ್ರಮೂರ್ತಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net