ಕೆಲಸಕ್ಕೆ ಗೈರಾಗುವ ಮೂಲಕ ಮುಷ್ಕರ

24mnv01
Published on

ಮಾನ್ವಿ: ರಾಜ್ಯ ಸರ್ಕಾರಿ ನೌಕರರ ವೇತನ ಭತ್ಯೆಗಳ ಪರಿಷ್ಕರಣೆ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವಂತೆ ಆಗ್ರಹಿಸಿ ಮಾ.1ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಶ್ರೀಶೈಲಗೌಡ ಹೇಳಿದರು. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರ್ತವ್ಯಕ್ಕೆ ಗೈರು ಹಾಜರಾಗುವ ಮೂಲಕ ಮುಷ್ಕರ ನಡೆಸಲಾಗುವುದು. ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾ ಕಾಲದ ಬದುಕು ಅತ್ಯಂತ ಕಷ್ಟಕರವಾಗಿರುವುದರಿಂದ ಎನ್‌ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ಸೇರಿಸಬೇಕು. ಪಂಜಾಬ್, ರಾಜಸ್ಥಾನ, ಛತೀಸ್‌ಘಡ, ಜಾರ್ಖಂಡ್, ಹಿಮಾಚಲ ಪ್ರದೇಶ ರಾಜ್ಯದಲ್ಲಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿ ರಾಜ್ಯದಲ್ಲೂ ಆಗಬೇಕು ಎಂದು ಆಗ್ರಹಿಸಿದರು. ಸಂಘದ ಗೌರವಾಧ್ಯಕ್ಷ ಸುರೇಶ ಕುರ್ಡಿ, ಉಪನ್ಯಾಸಕರ ಸಂಘದ ಅಧ್ಯಕ್ಷ ಸತ್ಯನಾರಾಯಣ, ಮುಖ್ಯಗುರುಗಳಾದ ಅಧ್ಯಕ್ಷ ಸಿದ್ರಾಮ ಯಾದವ, ಪ್ರೌಢಶಾಲಾ ಕಾರ್ಯದರ್ಶಿ ಅಶೋಕಕುಮಾರ, ಶಾಲಾ ಶಿಕ್ಷಕರ ಸಂಗದ ಅಧ್ಯಕ್ಷ ಸಂಗಮೇಶ ಮುಧೋಳ, ಹಂಪಣ್ಣ ಚಂಡೂರು, ಹನುಮಂತಪ್ಪ ಬಂಢಾರಿ, ಗೋಪಾಲನಾಯಕ, ತಿಮ್ಮೇಶನಾಯಕ, ಭಾಗಯ್ಯನಾಯಕ, ಸುರೇಶಕುಮಾರ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net