

ಮೈಸೂರು: ನಗರದ ಜೆಎಸ್‌ಎಸ್ ಆಸ್ಪತ್ರೆಯಲ್ಲಿ ನವಜಾತ ಶಿಶು ಆರೈಕೆಯಲ್ಲಿ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಕಾರ್ಯಾಗಾರ ಆಯೋಜಿಸಲಾಗಿತ್ತು.
ಜೆಎಸ್‌ಎಸ್ ಆಸ್ಪತ್ರೆಯ ಮಕ್ಕಳ ವಿಭಾಗ ಹಾಗೂ ಜೆಎಸ್‌ಎಸ್ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ನವಜಾತ ಶಿಶು ಆರೈಕೆಯಲ್ಲಿ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಕುರಿತ ಕಾರ್ಯಾಗಾರಕ್ಕೆ ಜೆಎಸ್‌ಎಸ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಸಿ.ಪಿ.ಮಧು ಚಾಲನೆ ನೀಡಿದರು.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ತಜ್ಞ ವೈದ್ಯರಾದ ಡಾ. ನವೀನ್ ಪ್ರಕಾಶ್ ಗುಪ್ತಾ, ಡಾ.ನಳಿನಿಕಾಂತ್, ಡಾ. ಪ್ರದೀಪ್‌ಕುಮಾರ್ ಶರ್ಮಾ, ಡಾ. ವೆಂಕಟೇಶ್, ಡಾ.ಶ್ವೇತಾ. ಡಾ. ಶ್ರೀನಿವಾಸ್‌ಮೂರ್ತಿ ಅವರು ನವಜಾತ ಶಿಶು ಆರೈಕೆಯಲ್ಲಿ ಅಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಬಗ್ಗೆ ಪ್ರಾತ್ಯಕ್ಷಿಕೆ ಪ್ರಯೋಗಗಳು ಹಾಗೂ ಉಪಯುಕ್ತತೆಗಳ ಬಗ್ಗೆ ಮಾಹಿತಿ ನೀಡಿದರು.
ನವಜಾತ ಶಿಶುವಿನ ಆರೈಕೆ ಮತ್ತು ರೋಗ ಪತ್ತೆ, ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ಹಲವು ವಿಷಯಗಳ ಕುರಿತು ಉಂಟಾದ ಸಂದೇಹಗಳಿಗೆ ಉತ್ತರ ನೀಡಿದರು.
ಮೈಸೂರು ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗದ ಮುಖ್ಯಸ್ಥೆ ಡಾ.ಸವಿತಾ, ಜೆಎಸ್‌ಎಸ್ ಆಸ್ಪತ್ರೆಯ ಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಪ್ರಶಾಂತ್, ಜೆಎಸ್‌ಎಸ್ ಆಸ್ಪತ್ರೆಯ ಹಿರಿಯ ವೈದ್ಯ ಡಾ.ನಾರಾಯಣಪ್ಪ, ಜೆಎಸ್‌ಎಸ್ ಆಸ್ಪತ್ರೆಯ ನವಜಾತ ಶಿಶು ತೀವ್ರನಿಗಾ ಘಟಕದ ಮುಖ್ಯಸ್ಥ ಡಾ.ಶ್ರೀನಿವಾಸ್‌ಮೂರ್ತಿ, ಆಸ್ಪತ್ರೆಯ ಮಕ್ಕಳ ವಿಭಾಗದ ವೈದ್ಯರು, ಬೋಧಕರು, ಪದವಿ ಪೂರ್ವ, ಸ್ನಾತಕೋತ್ತರ ಪದವೀಧರರು, ಸಂಶೋಧನಾ ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.