ವಿದ್ಯುತ್ ತಗುಲಿ ಕಾರ್ಮಿಕ ಸಾವು

Online Betting
Published on

ಸುಂಟಿಕೊಪ್ಪ : ತೋಟದಿಂದ ಅಲ್ಯೂಮಿನಿಯಂ ಪೈಪ್ ಸ್ಥಳಾಂತರ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಕೂಲಿ ಕಾರ್ಮಿಕ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಅಜೆಗುಂಡಿಕೊಪ್ಪ ಗ್ರಾಮದ ನಿವಾಸಿ ಯಲ್ಲಪ್ಪ (57) ಮೃತರು. ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳ್ಳೂರು ಗ್ರಾಮದ ಶಶಿಕಾಂತ್ ಅವರ ತೋಟದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು. ಸೋಮವಾರ ಬೆಳಗ್ಗೆ ಎಂದಿನಂತೆ ತೋಟದ ಕೆಲಸಕ್ಕೆ ಆಗಮಿಸಿದ್ದರು. ಮಾಲೀಕರು ತೋಟದಲ್ಲಿದ್ದ ಅಲ್ಯೂಮಿನಿಯಂ ಪೈಪ್‌ಗಳನ್ನು ಮತ್ತೊಂದು ತೋಟಕ್ಕೆ ಕೊಂಡೋಯ್ಯುವಾಗ ರಸ್ತೆಯಲ್ಲಿ ವಾಹನವೊಂದಕ್ಕೆ ಜಾಗ ಕೊಡಲು ಮುಂದಾದಾಗ ನಿಯಂತ್ರಣ ತಪ್ಪಿ ಪೈಪ್‌ನ ತುದಿ ಮೇಲೆ ಹೋಗಿ ವಿದ್ಯುತ್ ತಂತಿಗೆ ತಗುಲಿದ್ದರಿಂದ ವಿದ್ಯುತ್ ಸ್ಪರ್ಶಿಸಿ ಯಲ್ಲಪ್ಪ ಕುಸಿದು ಬಿದ್ದಿದ್ದಾರೆ. ಕೂಡಲೇ ಕುಶಾಲನಗರ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಈ ಸಂಬಂದ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net