

ಮೈಸೂರು: ನಗರದ ಕೆಆರ್‌ಎಸ್ ರಸ್ತೆಯಲ್ಲಿರುವ ಕಾರ್ಖಾನೆಯೊಂದರಲ್ಲಿ ಭಾನುವಾರ ವೆಲ್ಡಿಂಗ್ ಮಾಡುತ್ತಿದ್ದ ಸಂದರ್ಭ ಕಬ್ಬಿಣದ ರಾಡ್‌ಗಳು ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಬೆಲವತ್ತ ಗ್ರಾಮದ ನಿವಾಸಿ ಮಹೇಶ್ (38) ಮೃತ ದುರ್ದೈವಿ. ಮಹೇಶ್ ಕೆಲಸದಲ್ಲಿ ಮಗ್ನರಾಗಿದ್ದ ಸಂದರ್ಭ ಕಬ್ಬಿಣದ ರಾಡ್‌ಗಳು ಅವರ ತಲೆ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ದೇಹ ಸ್ಪಂದಿಸದೆ ಮೃತಪಟ್ಟರು. ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.