

ತಾಲೂಕು ಪಂಚಾಯಿತಿ ಸಭಾಭವನದಲ್ಲಿ ರಾಷ್ಟ್ರೀಯ ಡೆಂಘೆ ದಿನದ ಕುರಿತು ಪಂಚಾಯತ ಅಭಿವೃದ್ಧಿ ಅಧಿಕಾರಿಗಳಿಗೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಒಂದು ದಿನದ ಕಾರ್ಯಾಗಾರವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.
ಸಂಪನ್ಮೂಲ ವ್ಯಕ್ತಿ ಮಂಜುನಾಥ ಟಿ.ಪಿ ಮಾತನಾಡಿ, ಡೆಂಘೆ ರೋಗವು ಸೊಳ್ಳೆಗಳಿಂದ ಹರಡುವುದರಿಂದ ಸೊಳ್ಳೆಗಳ ಜೀವನಚಕ್ರ ಹಾಗೂ ಸೊಳ್ಳೆ ನಿಯಂತ್ರಣ ಕ್ರಮಗಳಿಂದ ರೋಗ ಹರಡುವಿಕೆ ತಪ್ಪಿಸಲು ಸಾಧ್ಯ ಎಂಬ ಸಮಗ್ರ ಮಾಹಿತಿ ನೀಡಿದರು.
ತಾಪಂ ಇಒ ಸುಭಾಷ್ ಸಂಪಗಾವ, ಕಾಲರಾ ನಿಯಂತ್ರಣಾಧಿಕಾರಿ ಡಾ. ಸವಿತಾ ನಾಡಗೌಡ, ತಾಲೂಕು ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್., ಆರೋಗ್ಯ ಮೇಲ್ವಿಚಾರಣಾಧಿಕಾರಿ ಕೆ.ಐ.ಶ್ಯಾವಿ, ಚಂದ್ರು ಪೂಜಾರಿ, ಗಿರೀಶ ಕೋರಿ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಬಸವಣ್ಯಪ್ಪ ಹೂಗಾರ, ತಾಲೂಕಾ ಆರೋಗ್ಯಾಧಿಕಾರಿಗಳು, ಸಿಬ್ಬಂದಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಇತರರು ಇದ್ದರು.