ಪರಿಸರ ಸ್ವಚ್ಛವಾಗಿದ್ದರೆ ಜನಮನಸ್ಸು ಪರಿಶುದ್ಧ - ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಅಶೋಕ್ ಕುಮಾರ್ ರೈ ಅಭಿಪ್ರಾಯ

oplus_2
oplus_2
Published on

ಪುತ್ತೂರು: ಪರಿಸರ ಸ್ವಚ್ಛವಾಗಿದ್ದರೆ ಅಲ್ಲಿ ಓಡಾಡುವ ಜನರ ಮನಸ್ಸು ಪರಿಶುದ್ಧವಾಗಿರುತ್ತದೆ. ಸ್ವಚ್ಛತಾ ಕಾರ್ಯದಲ್ಲಿ ತೊಡಗಿಕೊಂಡವರನ್ನು ಕೀಳಾಗಿ ನೋಡದೆ ಗೌರವದಿಂದ ಕಾಣಬೇಕು. ಪೌರ ಕಾರ್ಮಿಕರನ್ನು ಗುರುತಿಸುವುದರೊಂದಿಗೆ ಧೈರ್ಯ, ಸ್ಥೈರ್ಯ ತುಂಬುವ ಕಾರ್ಯ ಸರ್ಕಾರದಿಂದ ನಡೆಯುತ್ತಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಪುರಭವನದಲ್ಲಿ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ನಗರಸಭಾ ಲೆಕ್ಕಾಧೀಕ್ಷಕ ರಾಮಚಂದ್ರ ಸಾಗರ್ ರಚಿಸಿದ ಪೌರ ಕಾರ್ಮಿಕರ ಕಾರ್ಯಬದ್ಧತೆ, ಮಹತ್ವವನ್ನು ತಿಳಿಸುವ ಎಐ ವಿಡಿಯೋ ಸಹಿತ ಹಾಡನ್ನು ಪ್ರದರ್ಶಿಸಲಾಯಿತು. ೬೦ ಮಂದಿ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ಪೌರ ಕಾರ್ಮಿಕರ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸತೀಶ್ ಭಟ್ ಸಂಪನ್ಮೂಲ ವ್ಯಕ್ತಿಯಾಗಿದ್ದರು. ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ನಗರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಉಪಸ್ಥಿತರಿದ್ದರು. ಪೌರಾಯುಕ್ತೆ ವಿದ್ಯಾ ಎಸ್.ಕಾಳೆ ಸ್ವಾಗತಿಸಿದರು. ಉಪಾಧ್ಯಕ್ಷ ಬಾಲಚಂದ್ರ ಕೆ. ವಂದಿಸಿದರು. ಬಾಲಕೃಷ್ಣ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net