ಪಕ್ಷಕ್ಕೆ ಕಾರ್ಯಕರ್ತರೆ ಬೆನ್ನೆಲುಬು

MDK05
Published on

ಮಡಿಕೇರಿ: ಪಕ್ಷಕ್ಕೆ ಕಾರ್ಯಕರ್ತರೆ ಬೆನ್ನೆಲುಬಾಗಿದ್ದು, ತಳಮಟ್ಟದಿಂದ ಪಕ್ಷ ಕಟ್ಟುವ ಜವಾಬ್ದಾರಿ ಬೂತ್ ಸಮಿತಿಗಳಿಗಿದೆ ಎಂದು ವಿರಾಜಪೇಟೆ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಹೇಳಿದರು.


ಹಾಕತ್ತೂರು ಶಕ್ತಿ ಕೇಂದ್ರದಲ್ಲಿ ಆಯೋಜಿಸಿದ್ದ ಭೂತ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.


ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಿಲ್ಲೆ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಪಕ್ಷವನ್ನು ಕಟ್ಟುವ ಜವಾಬ್ದಾರಿ ತಳಮಟ್ಟದಿಂದ ನಡೆಯಬೇಕಿದೆ. ಈ ಸಂಬಂಧ ಕಾರ್ಯಕರ್ತರು ಶ್ರಮಿಸಬೇಕಿದೆ. ಸರ್ಕಾರದ ಯೋಜನೆಗಳನ್ನು ಪ್ರತಿಮನೆಮನೆಗೆ ತಲುಪಿಸುವಂತಾಗಬೇಕು. ಮುಂಬರುವ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಕಾರ್ಯಕರ್ತರು ಶ್ರಮಿಸುವಂತೆ ತಿಳಿಸಿದರು.


ಕಾರ್ಯಕ್ರಮದಲ್ಲಿ ಪಕ್ಷದ ಧ್ವಜಗಳನ್ನು ಕಾರ್ಯಕರ್ತರ ಮನೆಗಳಿಗೆ ಹಂಚಲಾಯಿತು.


ಸಭೆಯ ಅಧ್ಯಕ್ಷತೆಯನ್ನು ಹಾಕತ್ತೂರು ಶಕ್ತಿ ಕೇಂದ್ರ ಪ್ರಮುಖ ಪಿ.ಪಿ.ಸುಕುಮಾರ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷ ಕಾಂಗಿರ ಸತೀಶ್, ಮರಗೋಡು ಶಕ್ತಿ ಕೇಂದ್ರ ಪ್ರಮುಖರಾದ ಪೂವಯ್ಯ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net