ಕಾರ್ಯಕರ್ತರೇ ಕಾಂಗ್ರೆಸ್‌ನ ನಿಜವಾದ ಆಸ್ತಿ

3sri-2 (1)
Published on

ಶೃಂಗೇರಿ: ಪಕ್ಷಕ್ಕೆ ಕಾರ್ಯಕರ್ತರೇ ಆಸ್ತಿಯಾಗಿದ್ದು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಪಕ್ಷವನ್ನು ಇನ್ನಷ್ಟು ಬಲಪಡಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊಡ್ತಲು ರಮೇಶ್ ಭಟ್ ಹೇಳಿದರು.

ಅಡ್ಡಗದ್ದೆಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಪಕ್ಷವನ್ನು ಬೂತ್ ಮಟ್ಟದಿಂದ ಬಲಪಡಿಸಲು ಗ್ರಾಮಮಟ್ಟದ ಸಭೆ ಆಯೋಜಿಸಲಾಗುತ್ತದೆ. ಶಾಸಕರ ನೇತೃತ್ವದಲ್ಲಿ ಕ್ಷೇತ್ರಕ್ಕೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ನಡೆದಿದೆ. ಸರ್ಕಾರದ ಗ್ಯಾರಂಟಿ ಯೋಜನೆ ಮೂಲಕ ಪಕ್ಷಾತೀತವಾಗಿ ಎಲ್ಲರಿಗೂ ಲಾಭ ದೊರಕುತ್ತಿದೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾರ್ಯಕರ್ತರಿಗೆ ಆದ್ಯತೆ ನೀಡಲಾಗುವುದು ಎಂದರು.

ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾನುವಳ್ಳಿ ಕೃಷ್ಣಪ್ಪಗೌಡ ಮಾತನಾಡಿ, ಪಕ್ಷದ ಹಿರಿಯರು, ಕಿರಿಯರನ್ನು ಒಗ್ಗೂಡಿಸಿ ಪಕ್ಷವನ್ನು ಮುನ್ನೆಡೆಸುವ ಜವಾಬ್ದಾರಿ ನೂತನ ಅಧ್ಯಕ್ಷರ ಮೇಲಿದೆ. ಕಾರ್ಯಕರ್ತರು ತಮಗೆ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದರು.

ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎಂ.ರಮೇಶ್ ಭಟ್ ಮತ್ತು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರದೀಪ್ ಕಲ್ಲಾಳಿ ಅವರನ್ನು ಗೌರವಿಸಲಾಯಿತು. ಮುಖಂಡರಾದ ಲಕ್ಷ್ಮೀಶ, ಉಮೇಶ್ ಪುದುವಾಳ್, ಅನಿಲ್ ಹೊಸಕೊಪ್ಪ, ಶಕೀಲಾ ಗುಂಡಪ್ಪ, ನಾಗರಾಜ್, ಎ.ಸುಬ್ರಹ್ಮಣ್ಯ, ದೇವೇಂದ್ರ, ಗೋಳ್ಗೋಡ್ ನಾಗೇಶ್, ನಾಗೇಶ್, ತಿಮ್ಮಪ್ಪ ಸಿಂಧುವಳ್ಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net