ನರೇಗಾದಲ್ಲಿ ದುಡಿಯುವ ಕೈಗಳಿಗೆ ನಿರಂತರ ಕೆಲಸ

25Savadatti1
Published on

ಸವದತ್ತಿ: ದುಡಿಯುವ ಕೈಗಳಿಗೆ ಮನರೇಗಾ ಯೋಜನೆಯಡಿ ನಿರಂತರವಾಗಿ ಗಂಡು-ಹೆಣ್ಣಿಗೆ ಸಮಾನ ಕೆಲಸಕ್ಕೆ ಸಮಾನ ಕೂಲಿ ನೀಡಲಾಗುತ್ತಿದೆ ಎಂದು ತಾಪಂ ಇಒ ಆನಂದ ಬಡಕುಂದ್ರಿ ಹೇಳಿದರು.

ತಾಲೂಕಿನ ಕಲ್ಲಾಪುರ ಗ್ರಾಮದಲ್ಲಿ ಮನರೇಗಾ ಯೋಜನೆಯಡಿ ಕೈಗೊಂಡ ಹಳ್ಳ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ ಮಾತನಾಡಿ, ಏ.1 ರಿಂದ ಪ್ರತಿಯೊಬ್ಬರಿಗೂ ದಿನಕ್ಕೆ 370 ರೂ. ಕೂಲಿ ನೀಡಲಾಗುತ್ತಿದೆ. ಮನರೇಗಾ ಯೋಜನೆಯಡಿ ಕೈಗೊಂಡಿರುವ ಸಮುದಾಯ ಕಾಮಗಾರಿಯಲ್ಲಿ ಕೆಲಸ ಮಾಡುವ ಎಲ್ಲ ಕೂಲಿಕಾರರ ಹಾಜರಾತಿಯನ್ನು ಕಡ್ಡಾಯವಾಗಿ ಪ್ರತಿ ದಿನ 2 ಬಾರಿ ತೆಗೆದುಕೊಳ್ಳಲಾಗುವುದು. ಬೇಸಿಗೆಯಲ್ಲಿ ಬಿಸಿಲು ಹೆಚ್ಚಿರುವುದರಿಂದ ಎಲ್ಲ ಕೂಲಿಕಾರರಿಗೆ ಕೆಲಸದಲ್ಲಿ ಶೇ.30ರಷ್ಟು, ಅಂಗವಿಕಲರು ಹಾಗೂ ಹಿರಿಯ ನಾಗರಿಕರಿಗೆ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಿಸಲಾಯಿತು. ತಾಪಂ ಸಹಾಯಕ ನಿರ್ದೇಶಕ (ಗ್ರಾ.ಉ) ರಾಮಪ್ಪ ರಕ್ಕಸಗಿ, ಪಿಡಿಒ ಕೀರವ್ವ ಹಣಸಿ, ಗ್ರಾಪಂ ಸದಸ್ಯ ಈರಯ್ಯ, ತಾಪಂ ಐಇಸಿ ಸಂಯೋಜಕ ಮಲೀಕಜಾನ ಮೋಮಿನ್, ತಾಂತ್ರಿಕ ಸಂಯೋಜಕ ಮಹಾದೇವ ಕಾಮನ್ನವರ, ತಾಂತ್ರಿಕ ಸಹಾಯಕ ಭೀಮಪ್ಪ ಗೊರನಾಳ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net