ಕಾಮಗಾರಿ ಪರಿಶೀಲಿಸಿದ ಸಂಸದ ಶೆಟ್ಟರ್

1
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ನಡೆದ ಕಾಮಗಾರಿಯನ್ನು ಗುರುವಾರ ಸಂಸದ ಜಗದೀಶ ಶೆಟ್ಟರ್ ಪರಿಶೀಲಿಸಿದರು. ಎಸ್.ತ್ಯಾಗರಾಜನ್, ಪಿ.ಎಸ್. ದೇಸಾಯಿ ಇತರರು ಇದ್ದರು.
Published on

ಬೆಳಗಾವಿ: ಇಲ್ಲಿನ ವಿಮಾನ ನಿಲ್ದಾಣದಲ್ಲಿ 322 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಡೊಮೆಸ್ಟಿಕ್ ಟರ್ಮಿನಲ್ ಅಭಿವೃದ್ಧಿ ಕಾಮಗಾರಿಗಳನ್ನು ಸಂಸದ ಜಗದೀಶ ಶೆಟ್ಟರ್ ಗುರುವಾರ ಪರಿಶೀಲಿಸಿದರು.

ವಿಮಾನ ನಿಲ್ದಾಣ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಕೇಂದ್ರ ಸರ್ಕಾರದ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಾಮಗಾರಿ ನಿಗದಿತ ಸಮಯದಲ್ಲೇ ಪೂರ್ಣಗೊಳ್ಳಬೇಕು. ಅಲ್ಲದೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸುವ ಕುರಿತು ವರದಿ ಸಲ್ಲಿಸುವಂತೆ ಸೂಚಿಸಿದರು.

ಬೆಳಗಾವಿ ವಿಮಾನಯಾನ ಪ್ರಾಧಿಕಾರದ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯವಹಿಸದೆ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಬೇಕು ಎಂದು ಶೆಟ್ಟರ್ ಸೂಚಿಸಿದರು. ವಿಮಾನನಿಲ್ದಾಣ ನಿರ್ದೇಶಕ ಎಸ್.ತ್ಯಾಗರಾಜನ್, ಡಿಜಿಎಂ ಪಿ.ಎಸ್.ದೇಸಾಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net