

ಬೆಂಗಳೂರು: ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ಕಾಮಗಾರಿಗಳನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.
ಶನಿವಾರ ಲೋಕೋಪಯೋಗಿ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕಾಮಗಾರಿಗಳಲ್ಲಿ ಯಾವುದೇ ನ್ಯೂನತೆಗಳು ಕಂಡುಬಂದಲ್ಲಿ ಅಧಿಕಾರಿಗಳನ್ನೇ ಹೊಣೆಯಾಗಿಸುವುದಾಗಿ ಎಚ್ಚರಿಸಿದರು.
ಜನವರಿ ಅಂತ್ಯಕ್ಕೆ 6,594 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಅದರಲ್ಲಿ 4,675. ಕೋಟಿ. ರೂ ವೆಚ್ಚ ಮಾಡಲಾಗಿದೆ. ಡಿಎಸ್ಎಸ್ ತಂತ್ರಾಂಶಗಳನ್ವಯ ಕೆಡಿಪಿ ಸಭೆಯ ಆರ್ಥಿಕ ಪ್ರಗತಿಯ ವಿಷಯ ಸೂಚಿಯಲ್ಲಿ ಶೇ.93 ಪ್ರಗತಿ ಸಾಧಿಸಿ ಎ ಪ್ರವರ್ಗದಲ್ಲಿದೆ ಎಂದರು. ರಾಷ್ಟ್ರೀಯ ಹೆದ್ದಾರಿ ಯೋಜನೆ ಘಟಕಕ್ಕೆ 341 ಕೋಟಿ ರೂ. ಬಿಡುಗಡೆ ಮಾಡಿದ್ದು, 317 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕೆಆರ್ಡಿಸಿಎಲ್ಗೆ 300 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಶೇ.100 ವೆಚ್ಚ ಮಾಡಲಾಗಿದೆ. ರಾಜ್ಯ ಹೆದ್ದಾರಿ ಘಟಕದಲ್ಲಿ 333 ಕೋಟಿ ರೂ ಬಿಡುಗಡೆಯಾಗಿದ್ದು, ಸಂಪೂರ್ಣ ಮೊತ್ತವನ್ನು ಬಳಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.
ಮುಖ್ಯ ಇಂಜಿನಿಯರ್ಗಳು, ಇಇ ನಿಯಮಿತವಾಗಿ ಸಭೆ ನಡೆಸಿ, ಸಮಗ್ರವಾಗಿ ರ್ಚಚಿಸಬೇಕು. ಮುಖ್ಯ ಇಂಜಿನಿಯರ್ಗಳು ಕಾಮಗಾರಿಗಳನ್ನು ಖುದ್ದು ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.
ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ವೇಗಮಿತಿ ಸೂಚನಾಫಲಕಗಳನ್ನು ಅಳವಡಿಸಬೇಕು. ನೂತನ ರಸ್ತೆ ನಿರ್ವಿುಸುವಾಗ ಕನಿಷ್ಠ ಪ್ರಮುಖ ಸ್ಥಳಗಳಲ್ಲಿ, ಶಾಲೆ-ಕಾಲೇಜು, ಅಪಘಾತ ವಲಯಗಳ ಸ್ಥಳಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಬೇಕು. ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆ, ವಿಶೇಷ ಅಭಿವೃದ್ದಿ ಯೋಜನೆಯಡಿ ಯಾವುದೇ ಅನುದಾನ ಉಳಿಕೆಯಾದರೆ ಶಿಸ್ತು ಕ್ರಮಕೈಗೊಳ್ಳಲಾಗುವುದು. | ಗೋವಿಂದ ಕಾರಜೋಳ ಡಿಸಿಎಂ