

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಜಾಣ-ಜಾಣೆಯರ ವೇದಿಕೆ ಸಹಯೋಗದಲ್ಲಿ 2024ರ ಸೆಪ್ಟೆಂಬರ್ ತಿಂಗಳಿನಲ್ಲಿ ಪಿ. ಲಂಕೇಶ ಕೃತಿಗಳ ಕುರಿತು ಮೂರು ದಿನಗಳ ಕಾಲ ರಾಜ್ಯಮಟ್ಟದ ಅಧ್ಯಯನ ಶಿಬಿರವನ್ನು ಹಾಸನ ಜಿಲ್ಲೆಯಲ್ಲಿ ಆಯೋಜಿಸುತ್ತಿದೆ. ರಾಜ್ಯದ ಎಲ್ಲ ಭಾಗದ ಅಭ್ಯರ್ಥಿಗಳು ಅಕಾಡೆಮಿ ವೆಬ್ಸೈಟ್ ((http://karnatakasahithyaacademy.org)) ಮೂಲಕ ಆ. 17ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.