ಬೌದ್ಧಿಕ ಆಸ್ತಿ ಹಕ್ಕುಗಳ ರಕ್ಷಣೆ : ಪ್ರೋ.ಚಂದ್ರಶೇಖರ್ ಪ್ರತಿಪಾದನೆ

New Project (18)
Published on

ಉಳ್ಳಾಲ: ಆರ್ಥಿಕ ಬೆಳವಣಿಗೆ, ನಾವೀನ್ಯತೆ ಮತ್ತು ಸೃಜನಶೀಲತೆಯಲ್ಲಿ ಬೌದ್ಧಿಕ ಆಸ್ತಿ ಹಕ್ಕು ಮಹತ್ವದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳು ತಮ್ಮ ಸ್ವಂತ ಬೌದ್ಧಿಕ ಆಸ್ತಿಯನ್ನು ರಕ್ಷಿಸುವ ಮತ್ತು ಇತರರ ಹಕ್ಕುಗಳನ್ನು ಗೌರವಿಸುವುದು ಅಗತ್ಯ ಎಂದು ಪ್ರೊ.ಚಂದ್ರಶೇಖರ್ ಹೇಳಿದರು.

ತಲಪಾಡಿ ಶಾರದಾ ಕಾಲೇಜಿನ ಐಐಸಿ ಸಂಘದ ವತಿಯಿಂದ ಹಕ್ಕು ಸೌಮ್ಯ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳ ಸಂಬಂಧಿತ ಕಾರ್ಯಾಗಾರದಲ್ಲಿ ಮಾತನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ ಜೆ.ಪಣಿಕ್ಕರ್ ಮಾತನಾಡಿದರು. ಕಾರ್ಯಕ್ರಮ ಸಂಯೋಜಕರಾದ ಸಂಪ್ರೀತ ಕೆ., ಸುರಕ್ಷ ವಿಭಾಗದ ಮುಖ್ಯಸ್ಥರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ದೀಕ್ಷಾ ಸ್ವಾಗತಿಸಿದರು. ಸಾಲೋನಿ ವಂದಿಸಿದರು. ನಿರೀಕ್ಷಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net