ನಿಧಾನ ಕಲಿಕೆಯ ಮಕ್ಕಳಿಗೆ ಕಾರ್ಯಾಗಾರ

1
Published on

ಬೇಲೂರು : ಉತ್ತಮ ಫಲಿತಾಂಶ ತರುವ ನಿಟ್ಟಿನಲ್ಲಿ ಮಕ್ಕಳ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ. ನಾರಾಯಣ ಹೇಳಿದರು. ಬೇಲೂರಿನ ಮುರಾರ್ಜಿ ವಸತಿ ಶಾಲೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಲಿಕಾ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, 10ನೇ ತರಗತಿಯಲ್ಲಿ ನಿಧಾನ ಕಲಿಕೆ ಮಕ್ಕಳನ್ನು ಗುರುತಿಸಿ ನಾಲ್ಕು ಮುರಾರ್ಜಿ ವಸತಿ ಶಾಲೆಗಳಲ್ಲಿ ತಲಾ ಮೂವತ್ತು ವಿದ್ಯಾರ್ಥಿಗಳಂತೆ ಒಟ್ಟು 120 ಮಕ್ಕಳಿಗೆ ಕಾರ್ಯಾಗಾರ ಆಯೋಜಿಸಲಾಗಿದೆ ಎಂದರು. ಕಳೆದ ಸಾಲಿನಲ್ಲಿ ತಾಲೂಕು ಪಡೆದ 10ನೇ ತರಗತಿ ಫಲಿತಾಂಶ ಗಮನದಲ್ಲಿ ಇರಿಸಿಕೊಂಡು ಅದನ್ನು ಉನ್ನತೀಕರಿಸಲು ನಿಧಾನ ಕಲಿಕೆಯ ಮಕ್ಕಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ವಸತಿ ಶಾಲೆ ಮಕ್ಕಳಿಗೆಉತ್ತೇಜನ ನೀಡಲಾಗುತ್ತಿದೆ ಎಂದರು.
ಮುರಾರ್ಜಿ ವಸತಿ ಶಾಲೆಯ ಪ್ರಾಂಶುಪಾಲ ಸಾಮ್ಯ ನಾಯ್ಕ ಮಾತನಾಡಿ, ಬೆಳಗಿನ ಅವಧಿಯಲ್ಲಿ ಭಾಷಾ ವಿಷಯದಲ್ಲಿ ಬರವಣಿಗೆ, ಹಾಗೂ ಅಪರಾಹ್ನ ಕೋರ್ ವಿಷಯದಲ್ಲಿ ರಸಪ್ರಶ್ನೆ ಕಾರ್ಯಕ್ರಮ ಆಯೋಜಿಸಲಾಗಿದೆ. ಇದು ಮಕ್ಕಳಿಗೆ ಅತ್ಯಂತ ಉಪಯುಕ್ತ ಕಾರ್ಯಾಗಾರವಾಗಲಿದೆ ಎಂದರು. ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಹೇಮಂತ ಕುಮಾರ್, ವಿವಿಧ ಶಾಲೆಗಳ ಮುಖ್ಯಶಿಕ್ಷಕರು, ಶಿಕ್ಷಣ ಸಂಯೋಜಕರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net