ಲೇಖನ ಬರೆಯಲು ವಿದ್ಯಾರ್ಥಿಗಳಿಗೆ ಪ್ರೇರಣೆ : ಡಾ.ಗಣೇಶ್ ಪುತ್ತೂರು

kvg
Published on

ಸುಳ್ಯ: ಅಂತಾರಾಷ್ಟ್ರೀಯ ಮಟ್ಟದ ಲೇಖನ ಬರೆಯಲು ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಲು ಇಂತಹ ಕಾರ್ಯಾಗಾರಗಳು ಉಪಯುಕ್ತ ಎಂದು ಬೆಂಗಳೂರಿನ ಕಾಲೇಜು ಆಫ್ ಆಯುರ್ವೇದಿಕ್ ಸೈನ್ಸ್ ಮತ್ತು ರಿಸರ್ಚ್ ವಿಭಾಗದ ಮುಖ್ಯಸ್ಥ ಹಾಗೂ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್‌ನ ಬೋರ್ಡ್ ಆಫ್ ಸ್ಟಡೀಸ್ ಆಯುರ್ವೇದ ವಿಭಾಗದ ಚೇರ‌್ಮನ್ ಡಾ.ಗಣೇಶ್ ಪುತ್ತೂರು ಹೇಳಿದರು.

ಕೆವಿಜಿ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಇಂಡಿಯನ್ ಸಿಸ್ಟಮ್ ಆಫ್ ಮೆಡಿಸಿನ್ ಸಹಯೋಗದೊಂದಿಗೆ ಮೂರು ದಿನಗಳ ರಾಷ್ಟ್ರೀಯಮಟ್ಟದ ಸೈಂಟಿಫಿಕ್ ರೈಟಿಂಗ್, ರಿಸರ್ಚ್ ಇಂಟೆಗ್ರಿಟಿ ಮತ್ತು ಪಬ್ಲಿಕೇಶನ್ ಎಥಿಕ್ಸ್‌ನ ಸ್ನಾತಕೋತ್ತರ ಪದವಿ ಮಾರ್ಗದರ್ಶಕರ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ ಅಧ್ಯಕ್ಷತೆ ವಹಿಸಿದ್ದರು. ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಕಾರ್ಯದರ್ಶಿ ಹಾಗೂ ರಾಜೀವ್ ಗಾಂಧಿ ಯುನಿವರ್ಸಿಟಿ ಆಫ್ ಹೆಲ್ತ್ ಸೈನ್ಸ್‌ನ ಸೆನೆಟ್ ಸದಸ್ಯೆ ಡಾ.ಐಶ್ವರ್ಯ ಕೆ.ಸಿ ಮಾತನಾಡಿದರು.

ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ.ಲೀಲಾಧರ್ ಡಿ.ವಿ, ಕಾರ್ಯಾಗಾರದ ಸಂಘಟನಾ ಕಾರ್ಯದರ್ಶಿ ಡಾ.ಕವಿತಾ ಬಿ.ಯಂ ಉಪಸ್ಥಿತರಿದ್ದರು.

ತರಬೇತುದಾರರಾದ ಡಾ.ಪ್ರತಿಭಾ ಸಿ.ಕೆ, ಡಾ.ಆಶಾ ಎಸ್.ಎ, ಡಾ.ನಳಿನಾ ಸರಸ್ವತಿ, ದೇಶದ ವಿವಿಧ ಕಾಲೇಜುಗಳಿಂದ ಆಗಮಿಸಿದ ಸ್ನಾತಕೋತ್ತರ ಪದವಿ ಮಾರ್ಗದರ್ಶಕರು, ಸಂಸ್ಥೆಯ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ ನೀಡುವಲ್ಲಿ ಕೆವಿಜಿ ಸಂಸ್ಥೆ ಸದಾ ಮುಂಚೂಣಿಯಲ್ಲಿದೆ. ಮುಂದಿನ ದಿನಗಳಲ್ಲಿ ಅಲೋಪತಿ ವೈದ್ಯ ಪದ್ಧತಿಯವರಿಗೆ ಆಯುರ್ವೇದ ವೈದ್ಯ ಪದ್ಧತಿಯ ಬಗ್ಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಲಿದ್ದೇವೆ. - ಡಾ.ಕೆ.ವಿ.ಚಿದಾನಂದ, ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‌ನ ಅಧ್ಯಕ್ಷ https://www.vijayavani.net/dinesh-gundu-rao-meeting-2

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net