ಎಸ್‌ಡಿಎಂ ಕಾಲೇಜಿನಲ್ಲಿ ಕಾರ್ಯಾಗಾರ

New Project (1)
Published on

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ಶಿಕ್ಷಣ, ಸಂಶೋಧನೆ ಮತ್ತು ಉದ್ಯಮಶೀಲತೆ’ ಕುರಿತು ಅಂತರ್‌ಕಾಲೇಜು ಕಾರ್ಯಾಗಾರ ನಡೆಯಿತು. ಸುರತ್ಕಲ್ ಎನ್‌ಐಟಿಕೆ ನಿರ್ದೇಶಕ ಪ್ರೊ.ರವಿ ಮಾತನಾಡಿ, ಶಿಕ್ಷಕರು ಅಧ್ಯಾಪನದೊಂದಿಗೆ ಸಂಶೋಧನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಾಗ ಬೋಧನಾ ಸಾಮರ್ಥ್ಯ ಹೆಚ್ಚಾಗುವುದು ಎಂದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ್ ಉಪಸ್ಥಿತರಿದ್ದರು. ಪ್ರಾಚಾರ್ಯ ಡಾ.ಅಶೋಕ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮ ಸಂಯೋಜಕ ಡಾ.ಸುಬ್ರಹ್ಮಣ್ಯ ತೋಳ್ಪಾಡಿತ್ತಾಯ ಸ್ವಾಗತಿಸಿದರು. ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಪ್ರಾಧ್ಯಾಪಕರು ಭಾಗವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net