

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಉಜಿರೆ ಎಸ್.ಡಿ.ಎಂ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜು ಮತ್ತು ಉಜಿರೆ ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಸಹಯೋಗದಲ್ಲಿ ಎಸ್.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳ ಪಾಲಕರಿಗೆ ವಿಶ್ವ ಡಯಾಬಿಟಿಕ್ ದಿನದ ನಿಮಿತ್ತ ಔಷಧವಾಗಿ ಆಹಾರ ಕಾರ್ಯಾಗಾರ ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ಎಸ್.ಡಿ.ಎಂ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಬಿ.ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಉಜಿರೆ ಎಸ್.ಡಿ.ಎಂ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ನೈಸರ್ಗಿಕ ಚಿಕಿತ್ಸೆ ಮತ್ತು ಪೌಷ್ಠಿಕತೆಯ ವಿಭಾಗದ ಡೀನ್ ಡಾ.ಗೀತಾ ಬಿ.ಶೆಟ್ಟಿ ಪಾಲಕರಿಗೆ ತಮ್ಮ ಆರೋಗ್ಯ ಹಾಗೂ ಮಕ್ಕಳ ಆರೋಗ್ಯದ ಕುರಿತು ಮಾಹಿತಿ ನೀಡಿದರು.
ಶಾಲೆಯ ಪ್ರಾಂಶುಪಾಲ ಮನಮೋಹನ್ ನಾಯ್ಕ ಕೆ.ಜಿ.ಅಧ್ಯಕ್ಷತೆ ವಹಿಸಿದ್ದರು. ಪಾಲಕರಿಗೆ ಉಚಿತವಾಗಿ ಡಯಾಬಿಟಿಕ್ ತಪಾಸಣೆ, ರಕ್ತದೊತ್ತಡ ತಪಾಸಣೆ, ದೇಹತೂಕ ಮೌಲ್ಯಮಾಪನ ಹಾಗೂ ಆಹಾರ ಸಲಹೆ ನೀಡಲಾಯಿತು.
ಉಜಿರೆ ಎಸ್.ಡಿ.ಎಂ ನ್ಯಾಚುರೋಪತಿ ಹಾಗೂ ಯೋಗ ವಿಜ್ಞಾನ ಕಾಲೇಜಿನ ವಿದ್ಯಾರ್ಥಿನಿ ಮೇದಿನಿ ಕಾರ್ಯಕ್ರಮ ನಿರೂಪಿಸಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್‌ಗಾರ್ಟನ್ ಶಿಕ್ಷಕಿ ಜಿಜಿ ಜೋಸ್ ವಂದಿಸಿದರು.