ಶಾರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಕಾರ್ಯಾಗಾರ

New Project (25)
Published on

ಉಳ್ಳಾಲ: ತಲಪಾಡಿ ದೇವಿನಗರ ಶಾರದ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ಒತ್ತಡ ನಿರ್ವಹಣೆ ಎಂಬ ವಿಷಯದಲ್ಲಿ ವಿಶೇಷ ಕಾರ್ಯಾಗಾರ ನಡೆಯಿತು.

ಈಶಾ ಫೌಂಡೇಷನ್‌ನ ಪ್ರವೀಣ್ ಕುಮಾರ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಸರಳ ಯೋಗಾಭ್ಯಾಸಗಳ ಮೂಲಕ ನಾವು ದೈನಂದಿನ ಜೀವನದಲ್ಲಿ ಎದುರಾಗುವ ಒತ್ತಡಗಳನ್ನು ನಿವಾರಿಸಲು ಸಾಧ್ಯವಿದೆ. ಯೋಗದ ಮೂಲಕ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆತು ಮನಸ್ಸಿನ ಭಾವನೆಗಳನ್ನು ಹಿಡಿತದಲ್ಲಿಡಬಹುದು ಎಂದು ತಿಳಿಸಿದರು.

ಶಾಲೆಯ ಪ್ರಾಂಶುಪಾಲೆ ಸುಷ್ಮಾ ದಿನಕರ್ ಅಧ್ಯಕ್ಷತೆ ವಹಿಸಿದ್ದರು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗಣಿತ ವಿಭಾಗದ ಶಿಕ್ಷಕಿ ಸುಧಾ ಸ್ವಾಗತಿಸಿದರು. ಸಮಾಜ ವಿಜ್ಞಾನ ವಿಭಾಗದ ಶಿಕ್ಷಕಿ ಶರ್ಮಿಳಾ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net