ಯಶಸ್ಸಿನ ಮಂತ್ರ ಕಾರ್ಯಾಗಾರ

New Project (6)
Published on: 

ಬೆಳ್ತಂಗಡಿ: ವಿದ್ಯಾರ್ಥಿ ದೆಸೆಯಲ್ಲಿಯೇ ಬದುಕನ್ನು ಕಟ್ಟಿಕೊಳ್ಳಲು ಬೇಕಾದ ವೃತ್ತಿಯ ಬಗ್ಗೆ ಯೋಚಿಸಿ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳಬೇಕು ಎಂದು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪ್ರಸಾದ್ ಕುಮಾರ್ ಹೇಳಿದರು.

ಸ್ವಸ್ತಿಕಾ ನ್ಯಾಶನಲ್ ಬಿಸಿನೆಸ್ ಸ್ಕೂಲ್, ಮಂಗಳೂರು ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ಸಹಭಾಗಿತ್ವದಲ್ಲಿ ವಾಣಿಜ್ಯ ವಿಭಾಗದ ಆಯ್ದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಯಶಸ್ಸಿನ ಮಂತ್ರ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಉಪಸಿತರಿದ್ದರು. ಸ್ವಸ್ತಿಕಾ ನ್ಯಾಶನಲ್ ಬಿಸಿನೆಸ್ ಸ್ಕೂಲ್ ಮಂಗಳೂರು ಅಧ್ಯಕ್ಷ ಡಾ.ರಾಘವೇಂದ್ರ ಹೊಳ್ಳ ಎನ್.ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಶಾಲಿಕಾ ಪಿ.ಆರ್.ಸ್ವಾಗತಿಸಿದರು. ಪವಿತ್ರ ವಂದಿಸಿದರು. ಉಪನ್ಯಾಸಕಿ ಲತಾಶ್ರೀ ನಿರೂಪಿಸಿದರು.