

ಸುಳ್ಯ: ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ವತಿಯಿಂದ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಸಹಯೋಗದಲ್ಲಿ ಕನ್ನಡ ರಾಜ್ಯೋತ್ಸವ- ಸಾಹಿತ್ಯ ಸಂಭ್ರಮ ಅಂಗವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗೆ ಕಾರ್ಯಾಗಾರ ಸುಳ್ಯದ ಕನ್ನಡ ಭವನದಲ್ಲಿ ಶನಿವಾರ ನಡೆಯಿತು.
ಕ್ಷೇತ್ರ ಶಿಕ್ಷಣಾಧಿಕಾರಿ ಶೀತಲ್ ಯು.ಕೆ.ಉದ್ಘಾಟಿಸಿದರು. ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ಅಂಬ್ಲಮೊಗರು ಸರಕಾರಿ ಪ್ರೌಢಶಾಲಾ ಸಹಶಿಕ್ಷಕ ಡಾ.ರಾಮಮೂರ್ತಿ ಕೆ., ಬಂಟ್ವಾಳದ ಎಸ್ ವಿ.ಎಸ್.ದೇವಳ ಪ.ಪೂ.ಕಾಲೇಜಿನ ಉಪನ್ಯಾಸಕ ಜಯಾನಂದ ಪೆರಾಜೆ, ಸಜ್ಜನ ಪ್ರತಿಷ್ಠಾನದ ಕಾರ್ಯದರ್ಶಿ ಶರೀಫ್ ಜಟ್ಟಿಪಳ್ಳ, ಕಸಾಪ ಜಿಲ್ಲಾ ಪ್ರತಿನಿಧಿ ರಾಮಚಂದ್ರ ಪಲ್ಲತ್ತಡ್ಕ, ಗೌರವ ಕೋಶಾಧಿಕಾರಿ ದಯಾನಂದ ಆಳ್ವ ಸಂಪನ್ಮೂಲ ವ್ಯಕ್ತಿಗಳಾಗಿ ಉಪಸ್ಥಿತರಿದ್ದರು.
ಕಸಾಪ ಕಾರ್ಯಕಾರಿಣಿ ಸದಸ್ಯೆ ಶಶ್ಮಿ ಭಟ್ ಪ್ರಾರ್ಥಿಸಿದರು, ಸಂಕೀರ್ಣ ಚೊಕ್ಕಾಡಿ ಸ್ವಾಗತಿಸಿದರು. ಸಾವಿತ್ರಿ ಕಣೆಮರಡ್ಕ ವಂದಿಸಿದರು. ಗೋಪಿನಾಥ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು.