ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆ ಕಾರ್ಯಾಗಾರ

Published on

ಹುಬ್ಬಳ್ಳಿ: ಇಲ್ಲಿಯ ಇಂಪಲ್ಸ್ ಪದವಿಪೂರ್ವ ಮಹಾವಿದ್ಯಾಲಯ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗಯೊಂದಿಗೆ ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಣೆಗೆ ಸಂಬಂಧಿಸಿದಂತೆ ಇತ್ತೀಚೆಗೆ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಾಗಾರ ಉದ್ಘಾಟಿಸಿದ ಮುಖ್ಯ ಅತಿಥಿ ಪ್ರಮೋದ ರಾಯಚೂರ ಅವರು, ನಿರಂತರ ಅಧ್ಯಯನದಿಂದ ಮಾತ್ರ ಯಶಸ್ಸು ಸಾಧ್ಯ ಎಂದರು.

ಸರ್ಕಾರಿ ಪ್ರೌಢಶಾಲೆಯ ಶಿಕ್ಷಕರಾದ ಪ್ರತಿಭಾ ಹೂಗಾರ, ರಾಜಶ್ರೀ ಬೀಡಿ, ಕೃಷ್ಣಾ ತಿರುಮಲಮಠ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.

ಕಾರ್ಯಾಗಾರದಲ್ಲಿ ಸುಮಾರು 350ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಗಣಿತ ಮತ್ತು ವಿಜ್ಞಾನ ವಿಷಯಗಳ ಕುರಿತು ಪ್ರಶ್ನೆಪತ್ರಿಕೆಗಳ ಸ್ವರೂಪ ಮತ್ತು ನೀಲನೆ, ಸಮಯ ನಿರ್ವಹಣೆಯ ಜತೆಗೆ ಉತ್ತರಿಸುವ ಕೌಶಲಗಳ ಕುರಿತು ಉಪನ್ಯಾಸಕರು ಮಾಹಿತಿ ನೀಡಿದರು.

ಇಂಪಲ್ಸ್ ಮಹಾವಿದ್ಯಾಲಯದ ಉಪನ್ಯಾಸಕರಾದ ಆರ್.ಡಿ. ಶೇಖ, ಶಿಲ್ಪಾ ಎನ್.ಎಂ. ಹಾಗೂ ರಾಜೇಶ್ವರಿ ಅವರು ಪ್ರಯೋಗಗಳ ಮೂಲಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಿಸಲಾಯಿತು. ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಅನಿಸಿಕೆಗಳನ್ನು ವ್ಯಕ್ತಪಡಿಸಿದರು.

ಶೈಕ್ಷಣಿಕ ನಿರ್ದೇಶಕ ಎಸ್.ಬಿ. ಹಿರೇಮಠ, ಪ್ರಾಚಾರ್ಯ ಬಸವರಾಜ ಚಿನಿವಾಲ, ಲಕ್ಷ್ಮಿ ಹಿರೇಮಠ, ವಿವೇಕ ಅಕಾಡೆಮಿ ಸಂಸ್ಥಾಪಕ ನಾಗೇಶ ಗುಳೇದಗುಡ್ಡ ಉಪಸ್ಥಿತರಿದ್ದರು.

ಆಶಾ ಬದ್ರಿ ಮತ್ತು ಮಂಜುಳಾ ಕಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸುಜಾತಾ ಎನ್.ಎಂ. ಪರಿಚಯಿಸಿದರು. ಸುಮಯಾ ಬೆಳಗಲಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net