ಪರೀಕ್ಷೆಯ ಆತಂಕ ಬೇಡ ಅಭ್ಯಾಸ ಮಾಡಿ: ಜಿಲ್ಲಾಧಿಕಾರಿ ಡಾ.ಕುಮಾರ ಕಿವಿಮಾತು

Workshop for SSLC students Mandya
Published on

ಮಂಡ್ಯ: ವಿದ್ಯಾರ್ಥಿಗಳು ಸತತ ಅಭ್ಯಾಸ, ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಜಿಲ್ಲಾಧಿಕಾರಿ ಡಾ.ಕುಮಾರ ಹೇಳಿದರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಮಂಡ್ಯ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ವತಿಯಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ‘ಪರೀಕ್ಷಾ ಭಯ ನಿವಾರಣೆ ಹಾಗೂ ಆತ್ಮವಿಶ್ವಾಸ ವೃದ್ಧಿಸುವ ಸ್ಪೂರ್ತಿ ಸಿಂಚನ’ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪರೀಕ್ಷೆಯ ಬಗ್ಗೆ ಯಾವುದೇ ಆತಂಕ, ಭಯ ಬೇಡ. ಪ್ರತಿನಿತ್ಯ ಕನಿಷ್ಟ 8 ಗಂಟೆಗಳ ಕಾಲ ನಿರಂತರ ಅಭ್ಯಾಸ ಕೈಗೊಂಡರೆ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಎಂದು ತಿಳಿ ಹೇಳಿದರು.

ಡಿಡಿಪಿಐ ಎಚ್.ಶಿವರಾಮೇಗೌಡ ಮಾತನಾಡಿ, ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಅನಗತ್ಯ ಭಯ ಬೆಳೆಸಿಕೊಳ್ಳುವುದು ಬೇಡ. ಪ್ರತಿನಿತ್ಯ ಪ್ರತಿ ವಿಷಯಕ್ಕೆ ಅಗತ್ಯ ಒತ್ತು ನೀಡುವ ಮೂಲಕ ಕ್ಲಿಷ್ಟಕರ ವಿಷಯಗಳ ಬಗ್ಗೆ ಶಿಕ್ಷಕರಿಂದ ಅಗತ್ಯ ಮಾರ್ಗದರ್ಶನ ಪಡೆದು ಪರೀಕ್ಷೆಯನ್ನು ಸಶಕ್ತವಾಗಿ ಎದುರಿಸಬೇಕೆಂದು ಸಲಹೆ ನೀಡಿದರು.

ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿಗಳಾದ ಬಿ.ಸಿ.ಬಸವರಾಜು, ಗಣೇಶ್ ಬಾಲಕೃಷ್ಣನ್ ಅವರು ‘ಪರೀಕ್ಷಾ ಭಯ ನಿವಾರಣೆ, ಆತ್ಮವಿಶ್ವಾಸ, ವೃದ್ಧಿ’ ಹಾಗೂ ಪರೀಕ್ಷೆ ಎದುರಿಸಲು ಬೇಕಾದ ಅಗತ್ಯ ಸಲಹೆ, ಮಾರ್ಗದರ್ಶನ ನೀಡಿದರು. ಡಯಟ್ ಪ್ರಾಂಶುಪಾಲ ಪುರುಷೋತ್ತಮ್, ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವ, ಶಿಕ್ಷಣಾಧಿಕಾರಿ ಇಂದ್ರಾಣಿ, ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಚಂದ್ರಶೇಖರ್, ಕ್ಷೇತ್ರ ಸಮನ್ವಯಾಧಿಕಾರಿ ಎನ್.ಉಮೇಶ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಬಿ. ಶಿವರಾಮ, ಖಜಾಂಚಿ ಎಂ.ಸಿ. ರಾಜು, ಪದಾಧಿಕಾರಿಗಳಾದ ರಾಮಕೃಷ್ಣಯ್ಯ, ಡಾ. ಎಸ್.ಸಿ.ಮಂಗಳ, ಬಿ.ಬಿ. ಬೋರೇಗೌಡ, ಎ.ಬಸವರಾಜು, ಶಿಕ್ಷಣ ಸಂಯೋಜಕರಾದ ಸ್ವಾಮಿ, ಬಿ.ಎಲ್. ಮಧುಸೂದನ್, ಕೆ. ಭಾಸ್ಕರ್, ಕೆ. ನಾಗರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net