ಇ೦ದಿನ ಕೆಲಸ ಭವಿಷ್ಯತ್ತಿಗೆ ರಹದಾರಿ

27 Dwd 3
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಶಿಕ್ಷಣ ಹೆಚ್ಚೆಚ್ಚು ಅವಕಾಶಗಳಿಗೆ ಬಾಗಿಲು ತೆರೆಯುತ್ತದೆ. ಶಿಕ್ಷಣದಿಂದ ಉದ್ಯೋಗಾವಕಾಶಗಳು ಹೆಚ್ಚುತ್ತವೆ. ಇಂದು ಮಾಡುವ ಕೆಲಸವು ಭವಿಷತ್ತಿಗೆ ನಿಮ್ಮನ್ನು ಸಿದ್ಧಪಡಿಸುತ್ತದೆ ಎಂದು ಪ್ರಜ್ಞಾಪ್ರವಾಹ ಅಖಿಲ ಭಾರತ ಸಹ ಸಂಯೋಜಕ ರಘುನಂದನ್ ಹೇಳಿದರು.

ಬೆಂಗಳೂರಿನ ರಾಷ್ಟ್ರೋತ್ಥಾನ ಪರಿಷತ್‌ನಿಂದ ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಅಂಗಸ೦ಸ್ಥೆಗಳ ಶಾಲೆಗಳ ಶಿಕ್ಷಕರಿಗೆ ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಮಾಜಿ ಮೇಯರ್ ಈರೇಶ ಅಂಚಟಗೇರಿ ಮಾತನಾಡಿ, ಕಲಿಕೆಯನ್ನು ಎಂದಿಗೂ ನಿಲ್ಲಿಸಬಾರದು. ಪಡೆಯಬಹುದಾದ ಜ್ಞಾನದ ಪ್ರಮಾಣಕ್ಕೆ ಯಾವುದೇ ಮಿತಿ ಇಲ್ಲ. ಶಿಕ್ಷಣ ಕ್ಷೇತ್ರದ ಪರಿಣಿತರು ನೀಡಿದ ತರಬೇತಿಯನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳಿ ಎಂದರು.

ಜಗದೀಶ ಮಳಗಿ, ಬಸವರಾಜ ತಾಳಿಕೊಟಿ, ಎಸ್. ರಾಧಾಕೃಷ್ಣನ್, ಡಾ. ಆನಂದ ಹೊಸೂರ, ಜಿ.ಟಿ. ಪಾಟೀಲ, ವೀಣಾ ತುಪ್ಪದ, ಪುಷ್ಪಲತಾ ದೇಸಾಯಿ ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net