ಕಾರ್ಯಾಗಾರ 15ರಂದು

WEB LOGO
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಜಿಲ್ಲೆಯ ಮಾವು ಬೆಳೆಗಾರರಿಗೆ ಮಾವಿನಲ್ಲಿ ವೈಜ್ಞಾನಿಕ ಪದ್ಧತಿಯಿಂದ ಸಸ್ಯ ರಕ್ಷಣೆ, ಕೋಯ್ಲೋತ್ತರ ತಂತ್ರಜ್ಞಾನ ಹಾಗೂ ಮಾರಾಟ ಕುರಿತು ಫೆ. 15ರಂದು ಬೆಳಗ್ಗೆ 10.30ಕ್ಕೆ ಒಂದು ದಿನದ ಕಾರ್ಯಾಗಾರವನ್ನು ಇಲ್ಲಿನ ಜಂಟಿ ಕೃಷಿ ನಿರ್ದೇಶಕರ ಕಚೇರಿ ಆವರಣದಲ್ಲಿನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗಿದೆ.

ಕಾರ್ಯಾಗಾರಕ್ಕೆ ಜಿಲ್ಲೆಯ ಮಾವು ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ಅಧಿಕಾರಿಗಳು, ಹಿರಿಯ ತೋಟಗಾರಿಕೆ ನಿರ್ದೇಶಕರ ಕಚೇರಿ ಸಂಪಕಿರ್ಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net