ಗರ್ಭಕಂಠದ ಕ್ಯಾನ್ಸರ್ ಕುರಿತ ಕಾರ್ಯಾಗಾರ

12spt1
ಸೋಮವಾರಪೇಟೆ ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಆಶ್ರಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಡಾ.ಇಮಾನಿ ಮಾಹಿತಿ ನೀಡಿದರು. ಸಂಗೀತಾ, ಸುಮಲತಾ ಇದ್ದರು.
Published on

ಸೋಮವಾರಪೇಟೆ: ಇನ್ನರ್ ವ್ಹೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ಆಶ್ರಯದಲ್ಲಿ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಮಾಹಿತಿ ಕಾರ್ಯಾಗಾರ ಒಕ್ಕಲಿಗರ ಸಂಘದ ಶ್ರೀಗಂಧ ಹಾಲ್‌ನಲ್ಲಿ ಇತ್ತೀಚೆಗೆ ನಡೆಯಿತು.

ಸಾಯಿ ಆಸ್ಪತ್ರೆಯ ವೈದ್ಯಾಧಿಕಾರಿ ಇಮಾನಿ ಮಾಹಿತಿ ನೀಡಿ, ಗರ್ಭಕಂಠದ ನಿಯತಕಾಲಿಕ ತಪಾಸಣೆ ಮತ್ತು ಎಚ್‌ಪಿವಿ ಸೋಂಕಿನ ವಿರುದ್ಧ ವ್ಯಾಕ್ಸಿನೇಷನ್ ಎರಡೂ ಗರ್ಭಕಂಠದ ಕ್ಯಾನ್ಸರ್‌ಅನ್ನು ತಡೆಗಟ್ಟಲು ಕೆಲಸ ಮಾಡುತ್ತದೆ ಎಂದರು. ರೋಗದ ಅರಂಭಿಕ ಹಂತ, ರೋಗ ಲಕ್ಷಣಗಳು, ಅಪಾಯಕಾರಿ ಅಂಶಗಳು, ಚಿಕಿತ್ಸಾ ವಿವರಗಳನ್ನು ನೀಡಿದರು.

ಕ್ಲಬ್ ಸದಸ್ಯೆ ಹಾಗೂ ಶಿಕ್ಷಕಿ ಚಂದ್ರಕಲಾ ಬೋಜರಾಜ್ ಅವರನ್ನು ಸನ್ಮಾನಿಸಲಾಯಿತು. ಕ್ಲಬ್ ಅಧ್ಯಕ್ಷೆ ಸಂಗೀತಾ ದಿನೇಶ್, ಕಾರ್ಯದರ್ಶಿ ಸುಮಲತಾ ಪುರುಷೋತ್ತಮ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net