

ಮೈಸೂರು: ವಿದ್ಯಾವರ್ಧಕ ಪ್ರಥಮ ದರ್ಜೆ ಕಾಲೇಜಿನ ಗ್ರಂಥಾಲಯ ಮಾಹಿತಿ ಕೇಂದ್ರ ಮತ್ತು ಐಕ್ಯೊಎಸಿ ವತಿಯಿಂದ ಮಂಗಳವಾರ ಕಾಲೇಜಿನಲ್ಲಿ ಸಂಶೋಧನೆ ಮತ್ತು ಪ್ರಕಟಣಾ ಮೌಲ್ಯಗಳು ವಿಷಯದ ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.
ಮೈಸೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಡಾ.ಎಂ. ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿ ಸಂಶೋಧನೆಯ ಮಹತ್ವ, ಪ್ರಾಮುಖ್ಯತೆಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು. ಸಂಶೋಧನೆ ಎಂದರೆ ಎನು?, ಸಂಶೋಧಕರಿಗೆ ಇರಬೇಕಾದ ಅರ್ಹತೆಗಳೇನು?, ಸಂಶೋಧನೆಯು ಜ್ಞಾನದ ಅಭಿವೃದ್ಧಿಗೆ ಹೇಗೆ ಪೂರಕವಾಗಿದೆ ಹಾಗೂ ಇಂದು ವಿದ್ಯಾರ್ಥಿಗಳಿಗೆ ಸಂಶೋಧನೆಯ ಅವಶ್ಯಕತೆ ಎಷ್ಟು ಮುಖ್ಯವಾಗಿದೆ ಎಂಬ ವಿಚಾರ ತಿಳಿಸಿಕೊಟ್ಟರು. ಪ್ರಾಂಶುಪಾಲ ಡಾ.ಎಸ್.ಮರೀಗೌಡ ಅಧ್ಯಕ್ಷತೆ ವಹಿಸಿದ್ದರು. ಗ್ರಂಥಪಾಲಕ ಟಿ.ಎಂ. ಮಾದೇಶ್‌ಗೌಡ, ಅಧ್ಯಾಪಕ ಸಲಹೆಗಾರ ಡಾ.ಪಿ.ಕೆ. ಗೋವರ್ಧನ್ ಹಾಗೂ ಇತರರು ಇದ್ದರು.