

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲೆಯ ಎಲ್ಲ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಹಸೀಲ್ದಾರರಿಗೆ ಫೆ. 21ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಾಹಿತಿ ಹಕ್ಕು ಅಽನಿಯಮ- 2005 ಕುರಿತು ಕಾರ್ಯಾಗಾರ ಆಯೋಜಿಸಲಾಗಿದೆ. ಅಧಿಕಾರಿಗಳು ಹಾಗೂ ಅವರ ಕಚೇರಿಯ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳು ಕಚೇರಿಯ ಮಾಹಿತಿ ಹಕ್ಕು ವಿಷಯ ನಿರ್ವಾಹಕರೊಂದಿಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.