ಮಕ್ಕಳಿಗೆ ರಸ್ತೆ ಸುರಕ್ಷತೆ ಅರಿವು : ಹಳೆಯಂಗಡಿ ಹೆಡ್‌ಕಾನ್‌ಸ್ಟೆಬಲ್ ಗೀತಾ ಎಸ್. ಸಲಹೆ

New Project (17)
Published on

ಹಳೆಯಂಗಡಿ: ಮಕ್ಕಳಿಗೆ ಎಳೆಯ ಪ್ರಾಯದಲ್ಲಿ ರಸ್ತೆ ಸುರಕ್ಷತೆ, ಕಾನೂನು ಮಾಹಿತಿ ಹಾಗೂ ಉತ್ತಮ ಜೀವನ ಪದ್ಧತಿ ಬಗ್ಗೆ ಮಾಹಿತಿ ನೀಡಿದರೆ ಅವರು ಶ್ರೇಷ್ಠ ನಾಗರಿಕರಾಗಿ ಬೆಳೆಯುತ್ತಾರೆ ಎಂದು ಮಂಗಳೂರು ನಗರ ಸಂಚಾರಿ ಉತ್ತರ ಪೊಲೀಸ್ ಠಾಣೆ ಮಹಿಳಾ ಹೆಡ್‌ಕಾನ್‌ಸ್ಟೆಬಲ್ ಗೀತಾ ಎಸ್.ಹೇಳಿದರು.

ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ಕಿಶೋರ-ಕಿಶೋರಿ ಸಂಘದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಕುರಿತು ನಡೆದ ಕಾರ್ಯಗಾರದ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಯುವಕ ಮಂಡಲ ಪ್ರಧಾನ ಕಾರ್ಯದರ್ಶಿ ಯತೀಶ್ ಕೋಟ್ಯಾನ್, ಧನಂಜಯ್ ಕದ್ರಿ ತೋಟ, ಯುವತಿ ಮಂಡಲ ಅಧ್ಯಕ್ಷೆ ರಶ್ವಿತ, ಪ್ರಧಾನ ಕಾರ್ಯದರ್ಶಿ ದಿವ್ಯಶ್ರೀ ರಮೇಶ್ ಕೋಟ್ಯಾನ್, ಪ್ರಚೇತ, ಯಶಸ್ವಿನಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net