ಕಾರ್ಯಾಗಾರ ಇಂದು

Vijayavani-Featured-Image
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಚ್ಚ ನ್ಯಾಯಾಲಯದ ಕಾನೂನು ಸೇವಾ ಸಮಿತಿ ಧಾರವಾಡ ಪೀಠ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಆಶ್ರಯದಲ್ಲಿ ಮಧ್ಯಸ್ಥಿಕೆಗಾರರಿಗೆ 2 ದಿನಗಳ ಪುನರ್​ ಮನನ ತರಬೇತಿ ಕಾರ್ಯಗಾರವನ್ನು ಜು. 27ರಂದು ಬೆಳಗ್ಗೆ 10 ಗಂಟೆಗೆ ಜಿಪಂ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಅಂದು ಬೆಳಗ್ಗೆ 10 ಗಂಟೆಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಜಿ. ರಮಾ ಉದ್ಘಾಟಿಸುವರು. ಅತಿಥಿಗಳಾಗಿ ಕರ್ನಾಟಕ ರಾಜ್ಯ ಬಾರ್​ ಕೌನ್ಸಿಲ್​ ಸದಸ್ಯ ಆನಂದಕುಮಾರ ಮಗದುಮ, ವಿ.ಡಿ. ಕಾಮರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಅಶೋಕ ಏಣಿಗಿ ಆಗಮಿಸುವರು. ತರಬೇತುದಾರರಾಗಿ ಲಕ್ಷ್ಮೀಶರಾವ್​ ಹಾಗೂ ಬೀನಾ ದೇವರಾಜ್​ ಭಾಗವಹಿಸುವರು.
ತರಬೇತಿಯಲ್ಲಿ ಧಾರವಾಡ, ಗದಗ ಜಿಲ್ಲೆಯ ಮಧ್ಯಸ್ಥಿಕೆಗಾರರು ಹಾಗೂ ಉಚ್ಚ ನ್ಯಾಯಾಲಯ ಧಾರವಾಡ ಪೀಠದ ಮಧ್ಯಸ್ಥಿಕೆಗಾರರು ಭಾಗವಹಿಸುವರು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ದೊಡ್ಡಮನಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net