ದ್ವಂದ್ವ ನಿಲುವಿನಿಂದ ಸಮಾಜಕ್ಕೆ ಅನಾರೋಗ್ಯ: ವಿಶ್ರಾಂತ ನ್ಯಾಯಮೂರ್ತಿ ಶ್ಯಾಂ ಪ್ರಸಾದ್ ಬೇಸರ

World Anti Drug Day Mandya
Published on

ಮಂಡ್ಯ: ಜನಪ್ರತಿನಿಧಿಗಳು ಹಾಗೂ ಸರ್ಕಾರದ ದ್ವಂದ್ವ ನಿಲುವಿನಿಂದಾಗಿ ಸ್ವಾಸ್ತ್ಯ ಸಮಾಜ ಅನಾರೋಗ್ಯಕ್ಕೆ ಒಳಗಾಗುತ್ತಿದೆ. ಬಡವರು ಬಡವರಾಗಿಯೇ ಉಳಿಯುತ್ತಿದ್ದರೆ, ಸಿರಿವಂತರು ಶ್ರೀಮಂತರಾಗಿಯೇ ಮುಂದುವರಿಯುತ್ತಿದ್ದಾರೆ ಎಂದು ವಿಶ್ರಾಂತ ನ್ಯಾಯಮೂರ್ತಿ ಶ್ಯಾಂ ಪ್ರಸಾದ್ ವಿಷಾದಿಸಿದರು.

ನಗರದ ಧ್ವನಿ ಸಂಸ್ಥೆ ಆವರಣದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ, ನಿಷಾ ಮುಕ್ತ ಭಾರತ ಅಭಿಯಾನ, ಧ್ವನಿ ಗ್ರಾಮೀಣಾಭಿವೃದ್ಧಿ ಸಂಸ್ಥೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳುವ ಸರ್ಕಾರಗಳು ಪ್ರಜೆಗಳಿಗೆ ಉತ್ತಮ ವಾತಾವರಣ, ಮೂಲ ಸೌಲಭ್ಯ, ಶಿಕ್ಷಣ, ಆರೋಗ್ಯವನ್ನು ನೀಡಬೇಕು. ಆದರೆ ಇಂತಹ ಕೆಲಸವನ್ನು ಮಾಡದೆ ನಮ್ಮ ನಾಯಕರೆನಿಸಿಕೊಂಡವರು ಒಂದು ಕಡೆ ಮದ್ಯಪಾನ ಮಾಡಿ ಎನ್ನುವುದು, ಮತ್ತೊಂದು ಕಡೆ ಮದ್ಯ ಮುಕ್ತ ಭಾರತ ಮಾಡುತ್ತೇವೆ ಎಂದು ಹೇಳುವುದು. ಇದರಿಂದಾಗಿ ಜನತೆ ಗೊಂದಲಕ್ಕೊಳಗಾಗಿ ಮಾದಕ ವಸ್ತುಗಳ ದಾಸರಾಗುತ್ತಿದ್ದಾರೆ ಎಂದು ಕಿಡಿಕಾರಿದರು.

ಆದಿಚುಂಚನಗಿರಿ ಸಮುದಾಯ ಆರೋಗ್ಯ ವೈದ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ವಿಜಯ್ ಎಸ್.ಹೂಗಾರ್ ಮಾತನಾಡಿದರು. ರಾಜ್ಯ ಮಕ್ಕಳ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್, ಆದಿಚುಂಚನಗಿರಿ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಡಾ.ಎಂ.ಸಿ.ಪ್ರಭುದೇವ, ಜಿಲ್ಲಾ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿ ಎಸ್.ಎಸ್.ಕೋಮಲ್‌ಕುಮಾರ್, ಸಂಸ್ಥೆ ಕಾರ್ಯದರ್ಶಿ ಡಿ.ಸುಜಾತಾ, ಯೋಜನಾ ನಿರ್ದೇಶಕಿ ಡಿ.ತೇಜಕುಮಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net