

ಮಡಿಕೇರಿ: ವಿಶ್ವ ಪ್ರತಿಜೀವಕ ನಿರೋಧಕ ಜಾಗೃತಿ ಸಪ್ತಾಹ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳು ಜಾಗೃತಿ ಜಾಥಾ ಮಂಗಳವಾರ ನಡೆಯಿತು.
ಅಸಮರ್ಪಕವಾಗಿ, ಅಪೂರ್ಣವಾಗಿ ಔ?ಧಿಗಳನ್ನು ತೆಗೆದುಕೊಳ್ಳುವುದು ಹಾಗೂ ಅನಗತ್ಯವಾಗಿ ಉಪಯೋಗಿಸುವುದರ ವಿರುದ್ಧ ಜಾಗೃತಿ ಮೂಡಿಸುವುದಕ್ಕೆ ಸಂಸ್ಥೆಯ ವಿದ್ಯಾರ್ಥಿಗಳು ರಾಜಾಸೀಟ್ ಮಾರ್ಗವಾಗಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ವರೆಗೆ ಜಾಥಾ ನಡೆಸಿದರು.
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಇಎನ್‌ಟಿ ವಿಭಾಗದ ಮುಖ್ಯಸ್ಥರಾದ ಡಾ.ಶ್ವೇತಾ, ಡಾ.ಶಾಮಲ, ಡಾ.ಶ್ರೀದೇವಿ, ರವಿಕಿರಣ್, ಶ್ರುಶ್ರೂಷಕ ವಿಭಾಗದ ವಸಂತ, ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ಮತ್ತು ಪದವಿ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.