

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ ಪ್ರಯುಕ್ತ ನಗರದಲ್ಲಿ ಸೈಕಲ್ ಜಾಥಾ ನಡೆಯಿತು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಕಚೇರಿ ಆವರಣದಿಂದ ಪ್ರಾರಂಭಗೊಂಡ ಜಾಥಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ವೃತ್ತ, ಗೋಪಾಲಗೌಡ ಆಸ್ಪತ್ರೆಯ ವೃತ್ತದಿಂದ ಮರಳಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಆಗಮಿಸಿತು.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಹಾದೇವ ಪ್ರಸಾದ್, ಜಿಲ್ಲಾ ಸರ್ವೇಕ್ಷಣ ಅಧಿಕಾರಿ ಡಾ. ಅರ್ಚನಾ, ಕಾರ್ಯಕ್ರಮ ಸಂಯೋಜಕಿ ಪದ್ಮಾವತಿ, ಉಪ ಜಿಲ್ಲಾ ಆರೋಗ್ಯ ಅಧಿಕಾರಿ ಯಶೋಧಾ ಹಾಗೂ ಇತರರು ಇದ್ದರು.