ವಿಶ್ವ ರಕ್ತದಾನಿಗಳ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ * ರಕ್ತ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕ- ಡಾ.ವಿಜಯ ಶಂಕರ

raichur
raichur
Published on

 ರಾಯಚೂರು ಪ್ರತಿ ವರ್ಷ ರಕ್ತ ದಾನಿಗಳ ದಿನವನ್ನು ಆಚರಿಸಲಾಗುತ್ತದೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ರಕ್ತ ದಾನಿಗಳಿಗೆ ಕೃತಜ್ಞತೆ ಸಲ್ಲಿಸುವುದು ಈ ದಿನದ ಉದ್ದೇಶವಾಗಿದೆಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ವಿಜಯ ಶಂಕರ ಹೇಳಿದರು.

ನಗರದ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ರಿಮ್ಸ್ ಆಸ್ಪತ್ರೆ, ನವೋದಯ ಆಸ್ಪತ್ರೆ, ರಕ್ತ ನಿಧಿ ಕೇಂದ್ರ ಲಯನ್ಸ್ ಲಯನ್ಸ್ ಕ್ಲಬ್, ರೋಟರಿ ಕ್ಲಬ್, ಐಎಂಎ, ರೆಡ್ ಕ್ರಾಸ್ ಸಂಸ್ಥೆ, ಎಸ್‌ಕೆಇ ಪಾರಾ ಮೆಡಿಕಲ್ ಕಾಲೇಜು, ಎನ್‌ಎಸ್‌ಎಸ್ ಘಟಕ ವತಯಿಂದ ವಿಶ್ವ ರಕ್ತದಾನಿಗಳ ದಿನಾಚರಣೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.

ಪ್ರತಿಯೊಬ್ಬರು ರಕ್ತದಾನ ಮಾಡುವುದರಿಂದ ಒಂದು ಜೀವ ಉಳಿಯುತ್ತಿದೆ, ಹಾಗೂ ಮನುಷ್ಯನಿಗೆ ಯಾವುದೇ ಅಡ್ಡ ಪರಿಣಾಮಗಳಾಗುವುದಿಲ್ಲ, ರಕ್ತದಾನ ಮಾಡಿ ಮತ್ತೊಂದು ಜೀವ ಉಳಿಸುವ ಕೆಲಸ ಮಾಡಬೇಕು. ಅಗತ್ಯವಿರುವ ರೋಗಿಗಳಿಗೆ ರಕ್ತ ಲಭಿಸುವಂತೆ ನೋಡಿಕೊಳ್ಳುವುದಾಗಿದೆ. ರಕ್ತ ದಾನಿಗಳಿಂದ ಪ್ರತಿ ವರ್ಷ ಕೋಟ್ಯಾಂತರ ಜನರು ತಮ್ಮ ಜೀವವನ್ನು ಉಳಿಸಿಕೊಂಡಿದ್ದಾರೆ. ಅಲ್ಲದೆ ರಕ್ತ ನೀಡುವುದರ ಪರಿಣಾಮವು ಜೀವ ಉಳಿಸುವುದಕ್ಕಿಂತ ಮೀಗಿಲಾಗಿದೆ. ತುರ್ತು ಪರಿಸ್ಥಿತಿಗಳಿಗೆ ಒಳಗಾಗುವ ರೋಗಿಗಳಿಗೆ ರಕ್ತ ಅಗತ್ಯವಾಗಿದ್ದು, ದಾನಿಗಳಿಗೆ ರಕ್ತದಾನದಿಂದ ಆರೋಗ್ಯ ಪ್ರಯೋಜನಗಳೂ ಕೂಡ ಲಭಿಸುತ್ತವೆ ಎಂದರು.

ಈ ಸಂದರ್ಭದಲ್ಲಿ ಪ್ರಭಾರಿ ಡಿಎಚ್‌ಓ ಡಾ.ಗಣೇಶ್, ಡಾ.ಶಾಕಿರ್, ಪ್ರಭಾರಿ ತಾಲೂಕು ಅರೋಗ್ಯ ಅಧಿಕಾರಿ ಪ್ರಜ್ವಲ್ ಹಿರೇಮಠ, ಸಂದ್ಯಾ, ಶ್ರೀನಿವಾಸ್ ರಾಯಚೂರಕರ್, ಸರೋಜಾ, ಕೀರ್ತಿ, ಬಸಯ್ಯ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net