ವಿಶ್ವ ಸ್ತನ್ಯಪಾನ ವಾರಾಚರಣೆ

sthanyapana
ವಿಶ್ವ ಸ್ತನ್ಯಪಾನ ದಿನಾಚರಣೆಯ ಜಿಲ್ಲಾ ಮಟ್ಟದ ಉದ್ಘಾಟನೆಯನ್ನು ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಬಿ.ಸಂತೋಷ್ ನೆರವೇರಿಸಿ ಮಾತನಾಡಿದರು. ಜನಪರ ಆರೋಗ್ಯ ಕೇಂದ್ರದ ಜಿಲ್ಲಾ ನೋಡಲ್ ಅಧಿಕಾರಿ ಡಾ.ಧನ್ಯಾ ದಯಾನಂದ್, ನೀಲೇಶ್ವರಂ ಬ್ಲಾಕ್ ಸಿಡಿಪಿಒ ಜ್ಯೋತಿ ಪಿ. ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಕಾಸರಗೋಡು

ವಿಶ್ವ ಸ್ತನ್ಯಪಾನ ದಿನಾಚರಣೆಯ ಜಿಲ್ಲಾಮಟ್ಟದ ಉದ್ಘಾಟನೆ ತೃಕ್ಕರಿಪುರ ಉಡುಂಬುತ್ತಲ ಕುಟುಂಬ ಆರೋಗ್ಯ ಕೇಂದ್ರದಲ್ಲಿ ಜರುಗಿತು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಬಿ.ಸಂತೋಷ್ ಉದ್ಘಾಟಿಸಿದರು. ತೃಕ್ಕರಿಪುರ ಗ್ರಾಮ ಪಂಚಾಯಿತಿ ಸದಸ್ಯ ಎಂ.ಕೆ.ಹಾಜಿ ಅಧ್ಯಕ್ಷತೆ ವಹಿಸಿದ್ದರು.

ಜನಪರ ಆರೋಗ್ಯ ಕೇಂದ್ರದ ಜಿಲ್ಲಾ ನೋಡಲ್ ಅಧಿಕಾರಿ ಡಾ.ಧನ್ಯಾ ದಯಾನಂದ್, ನೀಲೇಶ್ವರಂ ಬ್ಲಾಕ್ ಸಿಡಿಪಿಒ ಜ್ಯೋತಿ ಪಿ., ಉಪ ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಪ್ರಶಾಂತ್ ಎನ್.ಪಿ.ಮತ್ತು ರಾಷ್ಟ್ರೀಯ ಆರೋಗ್ಯ ಮಿಷನ್ ಜೂನಿಯರ್ ಕನ್ಸಲ್ಟೆಂಟ್ ಕಮಲ್ ಕೆ.ಜೋಸ್ ಉಪಸ್ಥಿತರಿದ್ದರು. ಜಿಲ್ಲಾ ಶಿಕ್ಷಣ ಮತ್ತು ಮಾಧ್ಯಮ ಅಧಿಕಾರಿ ಅಬ್ದುಲ್ ಲತೀಫ್ ಮಠತ್ತಿಲ್ ಸ್ವಾಗತಿಸಿದರು. ಉಡುಂಬುತ್ತಲ ಕುಟುಂಬ ಆರೋಗ್ಯ ಕೇಂದ್ರದ ಪಿ.ಎಚ್.ಎನ್.ಪದ್ಮಿನಿ ಇ.ವಂದಿಸಿದರು.

ಉಡುಂಬುತ್ತಲ ಕುಟುಂಬ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಮಕ್ಕಳ ತಜ್ಞ ಡಾ. ಸಹದ್ ಬಿನ್ ಉಸ್ಮಾನ್ ಮತ್ತು ಜಿಲ್ಲಾ ಎಂಸಿಎಚ್ ಅಧಿಕಾರಿ ಶೋಭನಾ ಎಂ.ಅವರು ತಾಯಿಹಾಲಿನ ಮಹತ್ವದ ಕುರಿತು ತರಗತಿ ನಡೆಸಿದರು. ಕಾಸರಗೋಡು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ), ರಾಷ್ಟ್ರೀಯ ಆರೋಗ್ಯ ಮಿಷನ್ ಮತ್ತು ಐಎಪಿ ಕಾಂಞಂಗಾಡ್ ಸಂಯುಕ್ತಾಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತರು ಹಾಗೂ ತಾಯಂದಿರು ಭಾಗವಹಿಸಿದ್ದರು. ಸ್ತನ್ಯಪಾನದ ಮಹತ್ವದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆ.1ರಿಂದ 7ರ ವರೆಗೆ ಸ್ತನ್ಯಪಾನ ಸಪ್ತಾಹವನ್ನಾಗಿ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ (ಆರೋಗ್ಯ) ಡಾ.ಎ.ವಿ.ರಾಮದಾಸ್ ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net