ಆರಂಭಿಕ ಹಂತದಲ್ಲೇ ರೋಗ ಪತ್ತೆ ಅಗತ್ಯ...

CancerDay Lead
Published on

ಪ್ರಭಾರ ಡಿಎಚ್​ಒ ಡಾ. ನಾಗರತ್ನಾ ಅನಿಸಿಕೆ

ವಿಶ್ವ ಕ್ಯಾನ್ಸರ್​ ದಿನಾಚರಣೆ ಉದ್ಘಾಟನೆ

ವಿಜಯವಾಣಿ ಸುದ್ದಿಜಾಲ ಉಡುಪಿ

ಕ್ಯಾನ್ಸರ್​ ಕಾಯಿಲೆಯು ಇತ್ತೀಚೆಗೆ ಹಲವರನ್ನು ಕಾಡುತ್ತಿರುವ ಮಾರಕ ರೋಗವಾಗಿದ್ದು, ಯಾವುದೇ ಪ್ರಕಾರದ ಕ್ಯಾನ್ಸರ್​ ಆಗಿದ್ದರೂ ಸಹ ಆರಂಭಿಕ ಹಂತದಲ್ಲಿಯೇ ಗುರುತಿಸಿ, ಸೂಕ್ತ ಚಿಕಿತ್ಸೆ ಪಡೆದರೆ ಪ್ರಾಣಾಪಾಯದಿಂದ ಪಾರಾಗಬಹುದು. ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು ಕೇವಲ ನಾಮಕಾವಾಸ್ತೆ ಆಗಿರದೆ ಅದನ್ನು ಪರಿಣಾಮಕಾರಿಯಾಗಿ ಜನತೆಗೆ ತಲುಪಿಸುವಲ್ಲಿ ಆಶಾಕಾರ್ಯಕರ್ತೆಯರೂ ಶ್ರಮಿಸಬೇಕು ಎಂದು ಪ್ರಭಾರ ಡಿಎಚ್​ಒ ಡಾ. ನಾಗರತ್ನಾ ಕರೆ ನೀಡಿದರು.

ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಅಪ್ಪು ಅಭಿಮಾನಿಗಳ ಬಳಗ ಸೇರಿದಂತೆ ವಿವಿಧ ಸಂಘ-ಸಂಸ್ಥೆ ಆಶ್ರಯದಲ್ಲಿ ಸೋಮವಾರ ಆಯೋಜಿಸಿದ್ದ ವಿಶ್ವ ಕ್ಯಾನ್ಸರ್​ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕಾಯಿಲೆಯ ಅರಿವು ಅಗತ್ಯ

CancerDay-2
ಜಿಲ್ಲಾಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ವಾಸುದೇವ್​ ಪ್ರಾಸ್ತಾವಿಕವಾಗಿ ಮಾತನಾಡಿ, ಮೂವತ್ತು ವರ್ಷದ ಹಿಂದೆ ಕ್ಯಾನ್ಸರ್​ಅನ್ನು ಶ್ರೀಮಂತ ರಾಷ್ಟ್ರಗಳ ಕಾಯಿಲೆ ಎಂದು ಭಾವಿಸಿದ್ದೆವು. ಆದರೆ, ಇತ್ತೀಚಿನ ದಿನಗಳಲ್ಲಿ ನಮ್ಮ ಸುತ್ತಮುತ್ತಲಿರುವ ಜನರಲ್ಲಿ ಹಾಗೂ ಚಿಕ್ಕ ಮಕ್ಕಳಲ್ಲೂ ಈ ಕಾಯಿಲೆ ಕಾಣುತ್ತಿದ್ದೇವೆ. ಕ್ಯಾನ್ಸರ್​ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವುದರಿಂದ ಅದನ್ನು ತಡೆಗಟ್ಟಲು ಸಾಧ್ಯ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಚ್​.ಅಶೋಕ್​ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಕ್ಯಾನ್ಸರ್​ ಕಾಯಿಲೆಗೆ ಚಿಕಿತ್ಸೆ ಪಡೆದು ಗುಣಮುಖದಾರವರಿಗೆ ಆಹಾರದ ಕಿಟ್​ ಹಾಗೂ ನಗದು ವಿತರಿಸಲಾಯಿತು.

CancerDay-3
ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಭಾರತೀಯ ವೈದ್ಯಕಿಯ ಸಂಘ ಉಡುಪಿ ಕರಾವಳಿಯ ಅಧ್ಯಕ್ಷ ಡಾ.ಸುರೇಶ್​ ಶೆಣೈ, ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಸುಜಿತ್​ ಶೆಟ್ಟಿ, ಡಾ. ಮಂಜುನಾಥ್​, ಲಯನ್ಸ್​ ಕ್ಲಬ್​ ಉಡುಪಿಯ ಗಿರೀಶ್​ ಕಡ್ಡಿಪುಡಿ, ಅಪ್ಪು ಅಭಿಮಾನಿ ಬಳಗದ ಪ್ರೀತಮ್​ ಬಿ.ಎಸ್​., ಎನ್​ಸಿಡಿ ಕಾರ್ಯಕ್ರಮದ ಜಿಲ್ಲಾ ಸಮಾಲೋಚಕಿ ಡಾ. ಅಂಜಲಿ, ಆಪ್ತ ಸಮಾಲೋಚಕ ಮನು, ಜಿಲ್ಲಾಸ್ಪತ್ರೆಯ ಸಿಬ್ಬಂದಿ, ಜಿಲ್ಲೆಯ ವಿವಿಧ ಆರೋಗ್ಯ ಸಂಸ್ಥೆಗಳ ಆಶಾ ಕಾರ್ಯಕರ್ತೆಯರು, ನರ್ಸಿಂಗ್​ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಸತೀಶ್​ ಸ್ವಾಗತಿಸಿದರು. ಕ್ಷಯರೋಗ ಘಟಕದ ಹಿರಿಯ ಆರೋಗ್ಯ ಮೇಲ್ವಿಚಾರಕ ಪ್ರಶಾಂತ್​ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ವೈದ್ಯರಿಂದ ಉಪನ್ಯಾಸ

ಜಿಲ್ಲಾಸ್ಪತ್ರೆಯ ಹಿರಿಯ ಕ್ಯಾನ್ಸರ್​ ತಜ್ಞ ಡಾ. ವೆಂಕಟೇಶ್​ ಕಾಯಿಲೆ ಬರುವ ರೀತಿ ಹಾಗೂ ನಿಯಂತ್ರಣ ಕುರಿತು ಉಪನ್ಯಾಸ ನೀಡಿದರು. ಸ್ತ್ರೀ ರೋಗ ಪ್ರಸೂತಿ ತಜ್ಞ ಡಾ. ಶಶಾಂಕ್​ ಕಿಣಿ, ಮಹಿಳೆಯರಲ್ಲಿ ಕಂಡುಬರುವ ಗರ್ಭಕೋಶದ ಬಾಯಿಯ ಕ್ಯಾನ್ಸರ್​ ಪತ್ತೆ ಹಚ್ಚುವ ಕುರಿತು ಹಾಗೂ ಲಭ್ಯವಿರುವ ಚಿಕಿತ್ಸಾ ವಿಧಾನಗಳ ಮಾಹಿತಿ ನೀಡಿದರು. ಪುಷ್ಪಲತಾ ಅವರು ಆಯುಷ್ಮಾನ್​ ಭಾರತ್​ ಆರೋಗ್ಯ ಕರ್ನಾಟಕ ಕಾರ್ಡ್​ ಮೂಲಕ ಲಭ್ಯವಿರುವ ಚಿಕಿತ್ಸೆಯ ಮಾಹಿತಿ ನೀಡಿದರು.

ನಗರದಲ್ಲಿ ಕ್ಯಾನ್ಸರ್​ ಜಾಗೃತಿ ಜಾಥಾ

ಸಭಾ ಕಾರ್ಯಕ್ರಮದ ಬಳಿಕ ಆಸ್ಪತ್ರೆಯ ಆವರಣದಿಂದ ಕ್ಯಾನ್ಸರ್​ ಜಾಗೃತಿ ಮತ್ತು ಮಾಹಿತಿ ಕುರಿತ ಜಾಥಾ ನಡೆಯಿತು. ಬ್ರಹ್ಮಗಿರಿಯವರೆಗೆ ಮೆರವಣಿಗೆ ಸಾಗಿತು. ಆಶಾ ಕಾರ್ಯಕರ್ತೆಯರು, ಕಾಲೇಜು ವಿದ್ಯಾರ್ಥಿಗಳು ಕರಪತ್ರ ಹಿಡಿದು, ಘೋಷಣೆ ಕೂಗುತ್ತ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net