ದ.ಕ ಜಿಲ್ಲಾ ಮಟ್ಟದ ವಿಶ್ವ ಗ್ರಾಹಕ ದಿನಾಚರಣೆ

Published on

ಮಂಗಳೂರು: ಜಿಲ್ಲಾಡಳಿತ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗ, ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಮತ್ತು ಬೆಸೆಂಟ್ ಮಹಿಳಾ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸೋಮವಾರ ಬೆಸೆಂಟ್ ಕಾಲೇಜು ಸಭಾಂಗಣದಲ್ಲಿ ವಿಶ್ವ ಗ್ರಾಹಕರ ದಿನಾಚರಣೆ ಜರುಗಿತು.
ಬೆಸೆಂಟ್ ಕಾಲೇಜು ಸಂಚಾಲಕ ಕೆ. ದೇವಾನಂದ ಪೈ ಉದ್ಘಾಟಿಸಿ, ಗ್ರಾಹಕರೇ ದೇವರು ಎನ್ನುವ ಪರಿಸ್ಥಿತಿ ಇಂದು ಇಲ್ಲ. ನಾವು ಎಚ್ಚೆತ್ತರೆ ಮಾತ್ರ ವ್ಯಾಪಾರಿಗಳೂ ವಂಚನೆಯಿಂದ ಹಿಂದೆ ಸರಿಯುತ್ತಾರೆ ಎಂದರು.
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಉಪನಿರ್ದೇಶಕಿ ರಮ್ಯಾ ಸಿ.ಆರ್., ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಎಂ.ಜೆ.ಸಾಲ್ಯಾನ್, ಪ್ರಾಂಶುಪಾಲ ಸತೀಶ್ ಕುಮಾರ್ ಶೆಟ್ಟಿ ಪಿ., ಕಾವೂರು ಸರ್ಕಾರಿ ಕಾಲೇಜು ಪ್ರಾಂಶುಪಾಲೆ ಡಾ.ತಾರಾ ರಾವ್, ಎಸ್‌ಡಿಎಂ ಕಾಲೇಜು ಪ್ರಾಂಶುಪಾಲೆ ಅರುಣಾ ಪಿ.ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net