ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ

kallasaganike
Published on

ಮಡಿಕೇರಿ: ಮಾನವ ಕಳ್ಳ ಸಾಗಾಣಿಕೆಯಿಂದ ಸಮಾಜದಲ್ಲಿ ಸಾಮಾನ್ಯಯುತವಾಗಿ ಮಹಿಳೆಯರಿಗೆ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶುಭ ಹೇಳಿದರು.


ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ, ಇವರ ಸಹಯೋಗದೊಂದಿಗೆ ನಗರದ ಶಿಶು ಕಲ್ಯಾಣ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಶುಕ್ರವಾರ ಆಯೋಜಿಸಿದ್ದ ವಿಶ್ವ ಮಾನವ ಕಳ್ಳ ಸಾಗಾಣಿಕೆ ತಡೆ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


ಮಾನವ ಕಳ್ಳ ಸಾಗಾಣಿಕೆ ಎಂಬುವುದು ಸಾಮಾನ್ಯ ಮಹಿಳೆಯರಿಗೆ ಸಮಾಜದಲ್ಲಿ ಸಾಮಾನ್ಯಯುತವಾಗಿ ಜೀವನ ನಡೆಸಲು ಸಮಸ್ಯೆಯಾಗುತ್ತಿದೆ. ಮಹಿಳೆಯರನ್ನು ಕಳ್ಳ ಸಾಗಾಣಿಕೆಯಿಂದ ಅವರನ್ನು ಬೇರೆ ಬೇರೆ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳುತ್ತಿದ್ದು, ಕೆಲವು ಮಾರಕ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಅವರಿಗೆ ನೆರವು ನೀಡುವುದು, ಉತ್ತಮ ಸೌಲಭ್ಯವನ್ನು ಕಲ್ಪಿಸುವುದರ ಜತೆಗೆ ಶಿಕ್ಷಣದಿಂದ ವಂಚಿತರಾಗದಂತೆ ಕಾಪಾಡಲಾಗುತ್ತಿದೆ ಎಂದು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ನಟರಾಜ್, ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡುವುದು ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟಮಾಡುತ್ತಿದ್ದಾರ. ಅಲ್ಲದೇ, ಅವರನ್ನು ಬಲವಂತವಾಗಿ ದುಡಿಮೆಗಳಲ್ಲಿ ದುಡಿಸಿಕೊಳ್ಳುತ್ತಿದ್ದಾರೆ. ಅಪಾಯದ ಸ್ಥಳಗಳಲ್ಲಿ ಕೆಲಸ ಮಾಡುವಂತದ ಬಾಲ ಕಾರ್ಮಿಕರಾಗಿ ದುಡಿಸುವಂತದ್ದು, ಬಿಕ್ಷಾಟಣೆಗೆ ಮಕ್ಕಳನ್ನು ಅಥವಾ ಹಿರಿಯ ಜೀವಗಳನ್ನು ಬಿಡುವಂತದ್ದು ಸರಿಯಲ್ಲ ಎಂದ ಅವರು, ಮನುಷ್ಯನೇ ಮನುಷ್ಯರನ್ನು ಕಳ್ಳ ಸಾಗಾಣಿಕೆ ಮಾಡಿ, ಬೇರೆ ಬೇರೆ ಉದ್ದೇಶಗಳಿಗೆ ಅವರನ್ನು ಮಾರಾಟಮಾಡಲಾಗುತ್ತಿದೆ ಎಂದು ತಿಳಿಸಿದರು.


ಬಾಲ ಕಾರ್ಮಿಕ ಸೊಸೈಟಿಯ ಯೋಜನಾ ನಿರ್ದೇಶಕ ಸಿರಾಜ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸಾರ್ವಜನಿಕರು ಜಾಗೃತರಾಗಬೇಕು. ಇಂದು ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಹಲವಾರು ಕಾರ್ಯಕ್ರಮ ಆಯೋಜಿಸುವುದರ ಜತೆಗೆ ಕ್ರಿಯಾಯೋಜನೆಗಳನ್ನು ರೂಪಿಸಿದ್ದು, ತಂಡಗಳನ್ನು ರಚಿಸಿ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪಣತೊಟ್ಟಿದೆ. ಸಾರ್ವಜನಿಕರು ಈ ಕುರಿತು ಜಾಗೃತರಾಗಬೇಕು ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಕಿರಣ್, ಕಾರ್ಮಿಕ ಮಂಡಳಿಯ ಎಕ್ಸಿಕ್ಯೂಟಿವ್ ಪ್ರಸನ್ನ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಡಳಿತ ಸಹಾಯಕ ಜಯಪ್ಪ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net