ಅಂಗವಿಕಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ : ಅರುಣ್ ರೋಷನ್ ಡಿಸೋಜ ಹೇಳಿಕೆ

New Project (4)
Published on

ಬಂಟ್ವಾಳ: ಅಂಗವಿಕಲರನ್ನು ಮುಖ್ಯವಾಹಿನಿಗೆ ತರಲು ಸಂಘಟನೆ ಸಹಕಾರ ಅತ್ಯಗತ್ಯ. ಈ ನಿಟ್ಟಿನಲ್ಲಿ ವಿಕಾಸಂ, ರೋಟರಿ ಟೌನ್, ಲಯನ್ಸ್‌ನಂತಹ ಸಂಸ್ಥೆ ಕಾರ್ಯಪ್ರವೃತ್ತವಾಗಿರುವುದು ಅಭಿನಂದನೀಯ. ಅಂಗವಿಕಲರಲ್ಲಿ ಆತ್ಮವಿಶ್ವಾಸ ಮೂಡಿಸಲು ಇದು ಸಹಕಾರಿಯಾಗುತ್ತದೆ ಎಂದು ಬಂಟ್ವಾಳ ಭೂ ಅಭಿವೃದ್ಧಿ ಬ್ಯಾಂಕ್ ಅಧ್ಯಕ್ಷ, ವಕೀಲ ಅರುಣ್ ರೋಷನ್ ಡಿಸೋಜ ಹೇಳಿದರು.

ಬಿ.ಸಿ. ರೋಡಿನ ಅಂಬೇಡ್ಕರ್ ಭವನದಲ್ಲಿ ಮಂಗಳವಾರ ವಿಶ್ವ ಅಂಗವಿಕಲ ದಿನಾಚರಣೆ ಹಿನ್ನೆಲೆಯಲ್ಲಿ ವಿಕಾಸಂ ಸೇವಾ ಫೌಂಡೇಷನ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಸಂಪನ್ಮೂಲ ಕೇಂದ್ರ ವತಿಯಿಂದ ನಡೆದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಕಿಶೋರ್ ಕುಮಾರ್ ಮಾತನಾಡಿ, ವಿಶೇಷ ಚೇತನ ಮಕ್ಕಳು ಸಮಾಜದಲ್ಲಿ ಉತ್ತಮ ಸ್ಥಾನದೊಂದಿಗೆ ಗುರುತಿಸಲು ರೋಟರಿ ಟೌನ್ ಸಹಕಾರ ನೀಡುತ್ತದೆ ಎಂದರು.

ವಿಕಾಸಂ ಸೇವಾ ಫೌಂಡೇಷನ್ ಸಂಸ್ಥಾಪಕ ನಿರ್ದೇಶಕ ಗೋಪಾಲ್ ಗೋವಿಂತೋಟ ಅಧ್ಯಕ್ಷತೆ ವಹಿಸಿದ್ದರು. ಲಯನ್ಸ್ ಸೇವಾ ಟ್ರಸ್ಟ್ ಖಜಾಂಚಿ ಸುನೀಲ್ ಬಿ., ಸಕ್ಷಮ ದಕ್ಷಿಣ ಕನ್ನಡ ಜಿಲ್ಲಾ ಘಟಕಾಧ್ಯಕ್ಷ ರಾಜಶೇಖರ ಭಟ್ ಕಾಕುಂಜೆ ಮಾತನಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಶಿಕ್ಷಣ ಸಂಯೋಜಕಿ ಪ್ರತಿಮಾ ವೈ.ವಿ., ಕ್ಷೇತ್ರ ಸಂಪನ್ಮೂಲ ಕೇಂದ್ರ ಪ್ರಭಾರ ಸಮನ್ವಯಾಧಿಕಾರಿ ವಿದ್ಯಾಕುಮಾರಿ, ಸಂಪನ್ಮೂಲ ವ್ಯಕ್ತಿ ನಾಗರತ್ನ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮುಮ್ತಾಝ್, ವಿಕಾಸಂ ಸಂಸ್ಥೆ ಹಿತೈಷಿ ರಜನಿ ಜಿ.ಶೆಟ್ಟಿ ಉಪಸ್ಥಿತರಿದ್ದರು.

ವಿಕಾಸಂ ಸೇವಾ ಫೌಂಡೇಷನ್ ಸಂಸ್ಥಾಪಕ ನಿರ್ದೇಶಕ ಗಣೇಶ್ ಭಟ್ ವಾರಣಾಸಿ ಪ್ರಾಸ್ತಾವಿಕ ಮಾತನಾಡಿದರು. ನಿರ್ದೇಶಕ ಧರ್ಮಪ್ರಸಾದ್ ರೈ ವಂದಿಸಿದರು. ಕ್ಷೇತ್ರ ಸಂಪನ್ಮೂಲ ಕೇಂದ್ರ ವಿಶೇಷ ಸಂಪನ್ಮೂಲ ಅಧಿಕಾರಿ ಸುರೇಖಾ ಯಳವರ ಕಾರ್ಯಕ್ರಮ ನಿರ್ವಹಿಸಿದರು. ವಿಶೇಷ ಚೇತನ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net