ಪ್ಲಾಸ್ಟಿಕ್ ಮುಕ್ತ ಸಮಾಜಕ್ಕೆ ಆದ್ಯತೆ: ಸುಬ್ರಹ್ಮಣ್ಯ ವಲಯಾರಣ್ಯಾಧಿಕಾರಿ ವಿಮಲ್ ಬಾಬು ಕಿವಿಮಾತು

New Project (3)
Published on

ಸುಬ್ರಹ್ಮಣ್ಯ: ಪರಿಸರ ಸಂರಕ್ಷಣೆ ನಮ್ಮ ಜೀವನಕ್ಕೆ ಆಧಾರ. ಅರಣ್ಯ ಸೇರಿದಂತೆ ಪರಿಸರಕ್ಕೆ ಪ್ಲಾಸ್ಟಿಕ್ ಮಾರಕವಾಗಿದೆ. ಆದ್ದರಿಂದ ಪ್ಲಾಸ್ಟಿಕ್ ಉಪಯೋಗವನ್ನು ಪ್ರತಿಯೊಬ್ಬರೂ ತ್ಯಜಿಸಬೇಕು. ಯುವ ಜನಾಂಗ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣಕ್ಕೆ ಕೊಡುಗೆ ನೀಡಬೇಕು ಎಂದು ಸುಬ್ರಹ್ಮಣ್ಯದ ವಲಯಾರಣ್ಯಾಧಿಕಾರಿ ವಿಮಲ್ ಬಾಬು ಹೇಳಿದರು.

ಸುಬ್ರಹ್ಮಣ್ಯ ಎಸ್.ಎಸ್.ಪಿ.ಯು ಕಾಲೇಜು, ಸುಬ್ರಹ್ಮಣ್ಯ ರೋಟರಿ ಕ್ಲಬ್, ಸುಬ್ರಹ್ಮಣ್ಯ ವಲಯ ಅರಣ್ಯ ಇಲಾಖೆ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಕಾಲೇಜು ಪ್ರಯೋಗ ಶಾಲೆ ಮುಂಭಾಗದಲ್ಲಿ ವಿವಿಧ ಗಿಡಗಳನ್ನು ನೆಡಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಜಾಗೃತಿ ಮೂಡಿಸಲು ಪರಿಸರದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಸಲಾಯಿತು.

ಕಾಲೇಜು ಪ್ರಾಚಾರ್ಯ ಸೋಮಶೇಖರ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ರೋಟರಿ ಕ್ಲಬ್‌ನ ನಿಯೋಜಿತ ಅಧ್ಯಕ್ಷ ಜಯಪ್ರಕಾಶ್ ಆರ್., ಪೂರ್ವಾಧ್ಯಕ್ಷ ಗೋಪಾಲ್ ಎಣ್ಣೆಮಜಲು, ಉಪವಲಯಾರಣ್ಯಾಧಿಕಾರಿ ಅಪೂರ್ವ ಅಚ್ರಪ್ಪಾಡಿ, ಅರಣ್ಯ ವೀಕ್ಷಕ ರಾಮಚಂದ್ರ ಮಣಿಯಾಣಿ, ಉಪನ್ಯಾಸಕರಾದ ರಾಧಾಕೃಷ್ಣ ಚಿದ್ಗಲ್, ಮನೋಜ್ ಕುಮಾರ್ ಬಿ.ಎಸ್., ಅರಣ್ಯ ಇಲಾಖಾಧಿಕಾರಿಗಳು, ರೋಟರಿ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net