ಕುಂದಾಪುರ ಪುರಸಭೆಯಿಂದ ವಿಶ್ವ ಪರಿಸರ ದಿನಾಚರಣೆ

gan (3)
Published on

ಕುಂದಾಪುರ: ಕುಂದಾಪುರ ಪುರಸಭೆ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಕುಂದಾಪುರ ಪುರಸಭಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ, ಪುರಸಭೆಯ ಅಧ್ಯಕ್ಷರು, ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಮುಖ್ಯಾಧಿಕಾರಿಗಳು, ಅಧಿಕಾರಿ ಸಿಬ್ಬಂದಿ, ಸ್ವಸಹಾಯ ಸಂಘದ ಸದಸ್ಯರು ಗಿಡಗಳನ್ನು ನೆಟ್ಟರು. ಪರಿಸರ ಸಂರಕ್ಷಣೆ ಹಾಗೂ ಪ್ಲಾಸ್ಟಿಕ್ ಬಳಕೆಯ ಪರಿಣಾಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

ಪುರಸಭೆ ಅಧ್ಯಕ್ಷ ಮೋಹನದಾಸ ಶೆಣೈ, ಉಪಾಧ್ಯಕ್ಷೆ ವನಿತಾ ಎಸ್.ಬಿಲ್ಲವ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಭಾಕರ ವಿ., ಮುಖ್ಯಾಧಿಕಾರಿ ಆನಂದ ಜೆ., ಪುರಸಭೆ ಸದಸ್ಯರು, ಸಿಬ್ಬಂದಿ ಮೊದಲಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net